ಭೂ ಮಾಫಿಯಾ ನಿಯಂತ್ರಣ ಸಾಧ್ಯವಿಲ್ಲ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆಗೆ HDK ತರಾಟೆ
ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,` ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ- ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. 'ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,' ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು' ಎಂದು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former H.D. Kumaraswamy) ತರಾಟೆಗೆ ತೆಗೆದುಕೊಂಡಿದ್ದಾರೆ.
HD Kumaraswamy) ಹೇಳಿದ್ದಾರೆ.
ಇದನ್ನೂ ಓದಿ - Health Workers: ರಾಜ್ಯದ 'ಆರೋಗ್ಯ ಕಾರ್ಯಕರ್ತ'ರಿಗೆ ಗುಡ್ ನ್ಯೂಸ್..!
'ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,' ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು' ಎಂದು ಆಗ್ರಹಿಸಿದ್ದಾರೆ
Basavaraj Bommai: 'ಜಲಸಂಪನ್ಮೂಲ ಖಾತೆ' ಟವಲ್ ಹಾಕಿದ ಬಸವರಾಜ ಬೊಮ್ಮಾಯಿ..!
'ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ (Land Mafia) ಏನು ಮಾಡಲು ಸಾಧ್ಯ? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.