ಮೈಸೂರು: ಮೇ ತಿಂಗಳಿನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದೊಂದಿಗೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಅವರು, ರಾಮನಗರ ತಮ್ಮ ಸ್ವಕ್ಷೇತ್ರ, ಅದು ನನ್ನ ಕರ್ಮಭೂಮಿ. ಹಾಗಾಗಿ ಆ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಖಚಿತ. ಆದರೆ ಈ ಬಾರಿಯ ಚುನಾವಣೆಯಲ್ಲಿ ಒಂದೊಂದು ಸ್ಥಾನವೂ ಬಹಳ ಮುಖ್ಯವಾಗಿರುವುದರಿಂದ ರಾಮನಗರದೊಂದಿಗೆ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


ಹಾಗಿದ್ದರೆ, ಆ ಮತ್ತೊಂದು ಕ್ಷೇತ್ರ ಯಾವುದು ಎಂಬ ಸುದ್ದಿಗಾರರ ಪ್ರಶ್ನೆಗೆ, "ಬಹುಷಃ ಹಳೇ ಭಾಗದಲ್ಲೇ ಸ್ಪರ್ಧೆ ಮಾಡುತ್ತೇನೆ" ಎಂದು ಕುಮಾರಸ್ವಾಮಿ ಉತ್ತರಿಸಿದ್ದಾರೆ. ಆದರೆ ಆ ಕ್ಷೇತ್ರ ಯಾವುದು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. 


ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್​ 500ರಿಂದ 1000 ರೂ. ಹಣ ಹಂಚಿಕೆ ಮಾಡಲು ನಿರ್ಧರಿಸಿದೆ. ಹೀಗಾಗಿಯೇ ಅವರು 126 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಪ್ರತಿ ಮತಕ್ಕೂ ಹಣ ಹಂಚಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರಲ್ಲದೆ, ಮೈಸೂರಿನ ಮತದಾರರು ಕಾಂಗ್ರೆಸ್'ಗೆ ತಕ್ಕ ಉತ್ತರ ನೀಡಲಿದ್ದಾರೆ. ಮೈಸೂರು ಜಿಲ್ಲೆಯನ್ನು ಬಹಳ ಗಂಭಿರವಾಗಿ ನಾವು ಪರಿಗಣಿಸಿದ್ದು, ಅದಕ್ಕಾಗಿ ಮೈಸೂರಿನಿಂದಲೇ ಪ್ರಚಾರ ಆರಂಭಿಸಿರುವುದಾಗಿ ತಿಳಿಸಿದರು.