ಪರಿಶಿಷ್ಠ ಪಂಗಡದ ಮೀಸಲು ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಪರಿಶಿಷ್ಠ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.

Written by - Prashobh Devanahalli | Last Updated : Mar 17, 2022, 08:35 PM IST
  • ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
ಪರಿಶಿಷ್ಠ ಪಂಗಡದ ಮೀಸಲು ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ title=

ಬೆಂಗಳೂರು: ಪರಿಶಿಷ್ಠ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.

ಸ್ವಾಮೀಜಿ ಅವರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ಪಕ್ಷದ ಹಿರಿಯ ಮುಖಂಡರು, ಶಾಸಕರ ಜತೆ ಭೇಟಿ ನೀಡಿ ಶ್ರೀಗಳ ಕ್ಷೇಮ ವಿಚಾರಿಸಿದ ಕುಮಾರಸ್ವಾಮಿ (HD Kumaraswamy) ಅವರು, ನಾಯಕ ಸಮುದಾಯದ ಮೀಸಲು (Reservation) ಬೇಡಿಕೆಗೆ ಪಕ್ಷದ ಬೆಂಬಲವಿದೆ ಎಂದು ಘೋಷಿಸಿದರು.

ಮಕ್ಕಳ ಭವಿಷ್ಯದ ಬಗ್ಗೆ ನಿರ್ಲಕ್ಷ್ಯ ಬೇಡ; ತೀರ್ಪು ಪಾಲನೆ ಎಲ್ಲರ ಕರ್ತವ್ಯ ಎಂದ ಎಚ್ಡಿಕೆ

“ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿ ಅವರು ಮೀಸಲು ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದರು.ಆ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಹೈಕೋರ್ಟ್‌ʼನ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್.ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು. ಆ ಸಮಿತಿಯೂ ಈಗಾಗಲೇ ವರದಿ ಸಲ್ಲಿಸಿದ್ದರೂ ಸರಕಾರ ಅನುಷ್ಠಾನಕ್ಕೆ ತಂದಿಲ್ಲ.ಕೂಡಲೇ ಸರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಾ.ರಾ.ಮಹೇಶ್‌, ವೆಂಕಟರಾವ್‌ ನಾಡಗೌಡ, ಶಾಸಕರಾದ ಡಾ.ಅನ್ನದಾನಿ, ಅಶ್ವಿನ್‌ ಕುಮಾರ್‌, ರಾಜಾ ವೆಂಕಟಪ್ಪ ನಾಯಕ್‌, ವಿಧಾನಪರಿಷತ್‌ ಸದಸ್ಯ ಸಿ.ಎನ್.‌ಮಂಜೇಗೌಡ, ಹಿರಿಯ ಮುಖಂಡರಾದ ತಿಮ್ಮರಾಯಪ್ಪ, ಜಫ್ರುಲ್ಲಾ ಖಾನ್‌ ಮುಂತಾದವರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News