ಬಿಜೆಪಿಗೆ ಸೇರುವ ವದಂತಿಗೆ ತೆರೆ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್.ವಿಶ್ವನಾಥ್!

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇಂದಿನಿಂದಲೇ ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತೇನೆ ಎಂದು ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.

Updated: Aug 2, 2019 , 05:41 PM IST
ಬಿಜೆಪಿಗೆ ಸೇರುವ ವದಂತಿಗೆ ತೆರೆ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್.ವಿಶ್ವನಾಥ್!

ನವದೆಹಲಿ: ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಅನರ್ಹಗೊಂಡ ಅತೃಪ್ತ ಶಾಸಕ ಹೆಚ್.ವಿಶ್ವನಾಥ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದವರಲ್ಲಿ ಒಬ್ಬರಾದ ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಅವರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

"ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇಂದಿನಿಂದಲೇ ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತೇನೆ. ಬಿಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ" ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ. 

ಇದೇ ವೇಳೆ, ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಛಾತಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ನನ್ನನ್ನು ಪಕ್ಷದಿಂದ ಉಚ್ಛಾತಿಸುವ ಎಲ್ಲಾ ಅಧಿಕಾರ ಪಕ್ಷದ ಅಧ್ಯಕ್ಷರಿಗಿದೆ. ದೇವೇಗೌಡರು ಅವರ ಕೆಲಸವನ್ನು ನಿರ್ವಹಿಸಿದ್ದಾರಷ್ಟೇ ಎಂದು ಹೇಳಿದರು.