ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನ ಬೆಂಗಳೂರಿಗರಿಗೆ  ಮಳೆ ಕಾಟ ಮುಂದುವರೆಯಲಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಿಗೂ ಇಂದು ರೆಡ್ ಅಲರ್ಟ್  ಘೋಷಿಸಲಾಗಿದೆ. ಎರಡು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. 


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. 


ಇದನ್ನೂ ಓದಿ : ನವನಗರದ ಕ್ಯಾನ್ಸರ್ ಆಸ್ಪತ್ರೆಗೆ 10 ಕೋಟಿ ಆರ್ಥಿಕ ನೆರವು ನುಡಿದಂತೆ ನಡೆದ ಸಿಎಂ ಬೊಮ್ಮಾಯಿ


ಕರಾವಳಿ ಸೇರಿ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳವೆರೆಗೆ ಮಳೆ ಅಬ್ಬರ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದ್ದು, ಎರಡು ದಿನಗಳ ಬಳಿಕ ಯಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಣೆ  ಮಾಡಲಾಗಿದೆ. 


ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲ್ಬುರ್ಗಿ, ವಿಜಯಪುರ  ಸೇರಿ ಕೆಲವು ಜಿಲ್ಲೆಗಳಿಗೆ ಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಧಾರಾಕಾರ ಮಳೆ ಹಿನ್ನೆಲೆ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಕಲಾಗಿದೆ. ಬೆಂಗಳೂರು ನಗರ, ಗ್ರಾ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 


ಇದನ್ನೂ ಓದಿ : ವರಮಹಾಲಕ್ಷ್ಮೀ ವ್ರತ 2022: ಹಬ್ಬದ ಮಹತ್ವ, ಮುಹೂರ್ತದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.