HAL : ಡಿಪ್ಲೊಮಾ & ಏರ್​ಕ್ರಾಫ್ಟ್​​ ಟೆಕ್ನಿಷಿಯನ್ 160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

HAL : ಹೆಚ್ ಎ ಎಲ್ ನಲ್ಲಿ ​ಖಾಲಿ ಇರುವ 160  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Written by - Zee Kannada News Desk | Last Updated : Mar 12, 2024, 07:43 PM IST
  • ಮಾರ್ಚ್ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.
  • ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
  • ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2024ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
HAL : ಡಿಪ್ಲೊಮಾ & ಏರ್​ಕ್ರಾಫ್ಟ್​​ ಟೆಕ್ನಿಷಿಯನ್ 160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ title=

Vacancy Invitation : ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ 160 ಡಿಪ್ಲೊಮಾ & ಏರ್​ಕ್ರಾಫ್ಟ್​​ ಟೆಕ್ನಿಷಿಯನ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಹುದ್ದೆಯ ಮಾಹಿತಿ:
ಡಿಪ್ಲೊಮಾ ಟೆಕ್ನಿಷಿಯನ್​​- 137
ಏರ್​ಕ್ರಾಫ್ಟ್​​ ಟೆಕ್ನಿಷಿಯನ್​​ - 23

ವೇತನ:
ಮಾಸಿಕ ₹ 23,000- 57,000

ವಿದ್ಯಾರ್ಹತೆ:
ಡಿಪ್ಲೊಮಾ ಟೆಕ್ನಿಷಿಯನ್​​- ECE/EEE/ ಮೆಕ್ಯಾನಿಕಲ್​​ನಲ್ಲಿ ಡಿಪ್ಲೊಮಾ
ಏರ್​ಕ್ರಾಫ್ಟ್​​ ಟೆಕ್ನಿಷಿಯನ್​​ - ಎಲೆಕ್ಟ್ರಿಕಲ್/ಮೆಕ್ಯಾನಿಕಲ್​​ನಲ್ಲಿ ಡಿಪ್ಲೊಮಾ

ಇದನ್ನು ಓದಿ : 300 ಯೂನಿಟ್ ಉಚಿತ ವಿದ್ಯುತ್ ಬಳಿಕ, ಮೋದಿ ಸರ್ಕಾರದ ಮುಂದಿನ ಮಹತ್ವದ ಪ್ಲಾನ್ ಏನು ಗೊತ್ತಾ?

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2024ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವಯೋಮಿತಿ ಸಡಿಲಿಕೆ:
OBC-NCL ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಇದನ್ನು ಓದಿ : Aadhaar Card ವಂಚನೆಯಿಂದ ಪಾರಾಗಲು ಪ್ರತಿಯೊಬ್ಬರಿಗೂ ತಿಳಿದಿರಬೇಕು ಈ ಐದು ಸಂಗತಿಗಳು!

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ
ವ್ಯಕ್ತಿತ್ವ ಮತ್ತು ಪೂರ್ವಾಪರಗಳ ಪರಿಶೀಲನೆ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News