ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಬೇಕು.

Written by - Manjunath N | Last Updated : Dec 21, 2023, 05:21 PM IST
ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಆದೇಶ title=
file photo

ಗಂಗಾವತಿ: ಡಿಸೆಂಬರ್ 22 ರಂದು ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಡಿ.24 ರಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರ ಪ್ರಕಾರ ಡಿಸೆಂಬರ್ 22 ರ ಬೆಳಿಗ್ಗೆ 08 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆಯವರೆಗೆ ಗಂಗಾವತಿ ನಗರ ಠಾಣೆ ಮತ್ತು ಅಂಜನಾದ್ರಿ ಬೆಟ್ಟ ಹಾಗೂ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಬೇಕು. ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News