Hanur Town Panchayat: ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಮತ್ತು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ. ಹನೂರು ಪಟ್ಟಣ ಪಂಚಾಯಿತಿಯ 2ನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 1ನೇ ವಾರ್ಡಿನ ಮಮ್ತಾಜ್ ಭಾನುರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು.


COMMERCIAL BREAK
SCROLL TO CONTINUE READING

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ೮ನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ 2ನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್‌ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್‌ರವರಿಗೆ ಶಾಸಕ ಎಂ.ಆರ್.ಮಂಜುನಾಥ್, ಬಿಜೆಪಿ ಸದಸ್ಯೆ ರೂಪಾ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಮತಗಳು, ಸುದೇಶ್‌ರವರಿಗೆ ಕಾಂಗ್ರೆಸ್ ಪಕ್ಷದ 5 ಮತಗಳು ಬಿದ್ದಿದ್ದು, 3 ಮತಗಳ ಅಂತರದಿಂದ ಪರಾಭವಗೊಂಡರು‌. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ವೈ.ಕೆ.ಗುರುಪ್ರಸಾದ್ ಘೋಷಣೆ ಮಾಡಿದರು. 


ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮೂಡಾ ಸಂಕಷ್ಟ


ಹನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ 18 ವರ್ಷಗಳ ಬಳಿಕ ಪಟ್ಟಣ ಪಂಚಾಯಿತಿಯಲ್ಲಿ ಜಾ.ದಳ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊದಲ 2 ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳೇ ಬಹುಮತ ಪಡೆದುಕೊಂಡಿದ್ದರಿಂದ ಅಧಿಕಾರ ಪಡೆದುಕೊಂಡಿತ್ತು. 3ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಬಾರದೆ ಇದ್ದಿದ್ದರಿಂದ 3ನೇ ಚುನಾವಣೆಯ ಮೊದಲ ಅವಧಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಚಂದ್ರಮ್ಮ ಉಪಾಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾಗಿದ್ದರು.


2ನೇ ಅವಧಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸದಸ್ಯರುಗಳು 7 ಶಾಸಕ ಎಂ.ಆರ್.ಮಂಜುನಾಥ್ ಸೇರಿದಂತೆ 8 ಸದಸ್ಯರು ಇರುವುದರಿಂದ ಮೊಟ್ಟಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಜಾ.ದಳ ಪ್ರಪ್ರಥಮ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊಟ್ಟ ಮೊದಲ ಬಾರಿಗೆ ಹನೂರು ಪಟ್ಟಣದ ಇತಿಹಾಸದಲ್ಲಿಯೇ ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಲ್ಲಿ ಜಾದಳ ಅಧಿಕಾರ ಪಡೆದಿರಲಿಲ್ಲ, ಮೊದಲ ಬಾರಿಗೆ ಜಾದಳದ ಸದಸ್ಯರು ಪಟ್ಟಣ ಪಂಚಾಯಿತಿ ಚುಕ್ಕಾಣಿ ಅಲಂಕರಿಸಿದ ಹಿನ್ನೆಲೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯಕರ್ತರು ಮುಖಂಡರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ವಿತರಣೆ ಮಾಡಿದರು.


ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.