Karnataka State Open University: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..

ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗಿದೆ. ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು. 

Written by - Chetana Devarmani | Last Updated : Jul 16, 2022, 10:50 AM IST
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
  • ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
Karnataka State Open University: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..  title=
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ

ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗಿದೆ. ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು. ಆದರೆ 2013-14, 2014-15 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಕೋರ್ಸ್ ಗಳಿಗೆ ಯುಜಿಸಿ ಮಾನ್ಯತೆ ಸಿಗದೆ ಪರದಾಡಿದ್ದರು. ಇದರಿಂದಾಗಿ ಸುಮಾರು 90 ಸಾವಿರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು.

ಇದನ್ನೂ ಓದಿ: PSI Recruitment Scam: ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಸಿದ್ದರಾಮಯ್ಯ ಆಗ್ರಹ

ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್. ವಿದ್ಯಾಶಂಕರ್ ಈ ಕುರಿತು ಮಾತನಾಡಿದ್ದು, ಶುಭ ಸುದ್ದಿ ನೀಡಿದ್ದಾರೆ. 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ ಕೋರ್ಸ್‌ಗಳಿಗೆ ಯುಜಿಸಿ ಮಾನ್ಯತೆ ಮಾತ್ರಸಿಕ್ಕಿಲ್ಲ. ಇದಕ್ಕೆ ವಿದ್ಯಾರ್ಥಿಗಳು ಆತಂಕಪಡಬೇಕಿಲ್ಲ. ಯಾಕೆಂದರೆ ರಾಜ್ಯ ಸರ್ಕಾರದ ಮಾನ್ಯತೆ ಇದೆ ಎಂದು ತಿಳಿಸಿದ್ದಾರೆ. 

ಇದರ ಜೊತೆಗೆ ಯುಜಿಸಿ ಮಾನ್ಯತೆ ಪಡೆದುಕೊಳ್ಳುವ ಪ್ರಯತ್ನ ನಡೆದಿದ್ದು, ಇನ್ನು ಒಂದು ತಿಂಗಳಲ್ಲಿ ಇದು ಲಭ್ಯವಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ. ಇದು ಚಿಂತೆಗೀಡಾಗಿದ್ದ ವಿದ್ಯಾರ್ಥಿಗಳಲ್ಲಿ ಹರ್ಷ ಮೂಡಿಸಿದೆ. 

ಇದನ್ನೂ ಓದಿ: ಒಂದು ಎಕರೆ ಜಮೀನಿನಲ್ಲಿ 3 ಲಕ್ಷ ರೂ,ಆದಾಯ ಗಳಿಸಿದ ರೈತ..! ಇಲ್ಲಿದೆ ಯಶೋಗಾಥೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News