ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ.ಶಿವಕುಮಾರ್

Cauvery Water Sharing Dispute: ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್‌ಎಸ್, ಕಬಿನಿ ಮತ್ತು ಹೇಮಾವತಿ ಅಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲವಾಗುತ್ತದೆ‌‌ ಅಂತಾ ಡಿಕೆಶಿ ಹೇಳಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Sep 26, 2023, 07:07 PM IST
  • 12,500 ಕ್ಯೂಸೆಕ್ಸ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದು ಸಂತಸ ತಂದಿದೆ
  • ನಮ್ಮ ರಾಜ್ಯದ ಅಧಿಕಾರಿಗಳು ಸಮಿತಿಗೆ ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ
  • ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರವೆಂದ ಡಿಸಿಎಂ ಡಿಕೆಶಿ
ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ.ಶಿವಕುಮಾರ್  title=
ಮೇಕೆದಾಟು ಯೋಜನೆಯೇ ಪರಿಹಾರ!

ಬೆಂಗಳೂರು: ಪ್ರತಿದಿನ 12,500 ಕ್ಯೂಸೆಕ್ಸ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಿರಸ್ಕಾರ ಮಾಡಿದ್ದು ಸಂತಸ ತಂದಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿತ್ಯ 3000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸಿನ ಬಳಿಕ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

12,500 ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮಿತಿಗೆ ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ. ರಾಜ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡ ಸಮಿತಿಗೆ ಧನ್ಯವಾದ. ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್‌ಎಸ್, ಕಬಿನಿ ಮತ್ತು ಹೇಮಾವತಿ ಅಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲವಾಗುತ್ತದೆ‌‌. ಕಳೆದ ವಾರ ಸುಪ್ರೀಂಕೋರ್ಟ್ ತೀರ್ಪು ನೀಡುವ ಹೊತ್ತಿನಲ್ಲಿ " ಕರ್ನಾಟಕದವರು ಎಷ್ಟು ಬೇಕಾದರೂ ಅಣೆಕಟ್ಟು ಕಟ್ಟಿಕೊಳ್ಳಲಿ, ನಿಮಗೆ ತೊಂದರೆ ಏನು? ನಿಮ್ಮ ಪಾಲಿನ ನೀರು 177 ಟಿಎಂಸಿ ನಿಮಗೆ ಸಿಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ’ ಅಂತಾ ಡಿಕೆಶಿ ಹೇಳಿದ್ದಾರೆ.

ಮೇಕೆದಾಟು ಅಣೆಕಟ್ಟು ನೀರನ್ನು ಕನಕಪುರದವರು ಬಳಸಿಕೊಳ್ಳುತ್ತಾರೆಂದು ಯಾರೋ ಹೇಳುತ್ತಿದ್ದರು. ಅಣೆಕಟ್ಟು ಇರುವುದೇ ತಮಿಳುನಾಡು ಗಡಿಯಲ್ಲಿ ತಿರುಗೇಟು ನೀಡಿದ ಡಿಕೆಶಿ, ‘ಕಾವೇರಿ ನೀರಿನ ಎರಡೂ ಸಮಿತಿಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಸುಪ್ರೀಂಕೋರ್ಟಿನ ತೀರ್ಪಿನಿಂದ ಮತ್ತೊಮ್ಮೆ ಭರವಸೆ ಮೂಡಿದೆ, ಆದ ಕಾರಣ ನಮ್ಮ ಸಂಸದರು, ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕಬೇಕು’ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬೇಡಿ

ರಾಜ್ಯದ ಜನರು ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಮ್ಮೆ ಬಂದ್‌ ಮಾಡಲು ನ್ಯಾಯಾಲಯ ಬಿಡುವುದಿಲ್ಲ, ಆದ ಕಾರಣ ಸೆ.29ರ ಬಂದ್‌ಗೆ ಅವಕಾಶವಿಲ್ಲವೆಂದ ಡಿಕೆಶಿ, ‘ಕಾವೇರಿ ಹೋರಾಟದ ಜೊತೆಗೆ ರಾಜಕೀಯ ಟೀಕೆ ಕುರಿತ ಮಾಧ್ಯಮಗಳ ಪ್ರಶ್ನೆಗೆ "ಟೀಕೆ ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಾರೆ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ಆಗುವುದಿಲ್ಲ. ಬೇಸರ ಮಾಡಿಕೊಳ್ಳಲೂ ಹೋಗುವುದಿಲ್ಲ. ಪ್ರಜಾಪ್ರಭುತ್ವದ ಹಕ್ಕನ್ನು ನಾವು ಪ್ರಶ್ನಿಸಬಾರದು. ಮಾಧ್ಯಮಗಳು ಸಹ ನಮ್ಮ‌ ಮೇಲೆ ಇಲ್ಲಸಲ್ಲದ ಕಥೆಗಳನ್ನು ಹೇಳುತ್ತಾರೆ,‌ ಇದೆಲ್ಲಾ ರಾಜಕೀಯದ ಒಂದು ಭಾಗ’ ಎಂದು ಉತ್ತರಿಸಿದರು.

ನಿಮ್ಮ ಆಡಳಿತವಾಧಿಯಲ್ಲಿ ಮೇಕೆದಾಟು ಯೋಜನೆ ಆಗುತ್ತದೆಯೇ ಎನ್ನುವ ಪ್ರಶ್ನೆಗೆ "ಕಾಲವೇ ಉತ್ತರ ಕೊಡುತ್ತದೆ" ಎಂದ ಡಿಕೆಶಿ, ಜಯನಗರದ ಶಾಸಕರ ನೇತೃತ್ವದಲ್ಲಿ ದಾಂಧಲೆ ನಡೆದಿದೆ ಎನ್ನುವ ಪ್ರಶ್ನೆಗೆ ‘ಸಾರ್ವಜನಿಕರ ಆಸ್ತಿ ಹಾನಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಇದನ್ನು ಮಾಡುವುದಿಲ್ಲ, ನ್ಯಾಯಾಲಯ ಮಾಡುತ್ತದೆ. ಬಂದ್ ಮಾಡುವ ಮುಂಚಿತವಾಗಿ ಸೂಚನೆಯನ್ನೂ ನೀಡಿದೆ ಎಂದು ಎಚ್ಚರಿಕೆ ನೀಡಿದರು.

ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ‌. ರಾಜ್ಯದ ಜನರೆಲ್ಲರೂ ಮಳೆಗಾಗಿ ಪ್ರಾರ್ಥನೆ ಮಾಡೋಣವೆಂದ ಡಿಕೆಶಿ, ಇಂದು (ಸೆ.26) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ತಮಿಳುನಾಡಿಗೆ ಅ.15ರವರೆಗೆ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News