ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ: ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು

Karnataka News: ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, "ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ.

Written by - Prashobh Devanahalli | Edited by - Bhavishya Shetty | Last Updated : Jul 23, 2023, 12:58 PM IST
    • ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
    • ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
    • ಬದುಕಿನಲ್ಲಿ ಯಶಸ್ಸು ಗಳಿಸಲು ಕಠಿಣ ಪರಿಶ್ರಮವೊಂದೇ ಕೀಲಿಕೈ" ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.
ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ: ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು title=
Krishnabhairegowda

ಬೆಂಗಳೂರು ಸುದ್ದಿ: ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, "ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ. ಈ ಗುರಿಯನ್ನು ತಲುಪಲು, ಬದುಕಿನಲ್ಲಿ ಯಶಸ್ಸು ಗಳಿಸಲು ಕಠಿಣ ಪರಿಶ್ರಮವೊಂದೇ ಕೀಲಿಕೈ" ಎಂದು ಹೇಳಿದರು.

ಇದನ್ನೂ ಓದಿ:ಉಚಿತ Amazon Prime ಸದಸ್ಯತ್ವ ಪಡೆದುಕೊಳ್ಳಬೇಕೇ? ಹೀಗೆ ಮಾಡಿ

ಸರ್ಕಾರಿ ಶಾಲೆಯಲ್ಲಿ ಓದಿದ ಅನೇಕರು ಇಂದು ಇಂಜಿನಿಯರ್, ಡಾಕ್ಟರ್, ವಿಜ್ಞಾನಿಗಳಾಗಿದ್ದಾರೆ. ಸೌಲಭ್ಯಗಳ ಕೊರತೆಯ ನಡುವೆಯೂ ಓದಿ ಯಶಸ್ಸು ಗಳಿಸಿದ್ದಾರೆ. ಇದಕ್ಕೆ ಕಾರಣ ಕಠಿಣ ಪರಿಶ್ರಮ. ಇಂದು 10-12ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಪದವಿ ಸೇರಿದಂತೆ ಉನ್ನತ ಶಿಕ್ಷಣಕ್ಕೆ ತೆರಳಲಿದ್ದಾರೆ. ನಮ್ಮ ವಿದ್ಯಾರ್ಥಿಗಳು ಅಲ್ಲಿಯೂ ಉತ್ತಮ ಗಳಿಸಲಿ, ಖುಷಿಯ ಬದುಕು ಅವರದಾಗಲಿ” ಎಂದು ಹಾರೈಸಿದರು.

ಅಂಕಗಳೊಂದೇ ಶಿಕ್ಷಣದ ಮಾನದಂಡವಲ್ಲ. ಆದರೆ, ವಿದ್ಯಾರ್ಥಿ ಶಿಕ್ಷಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದಾನೆ, ಪರೀಕ್ಷೆಗೆ ಎಷ್ಟು ಕಷ್ಟಪಟ್ಟು ಓದಿದ್ದಾನೆ ಎಂಬುದನ್ನು ಆತನ ಅಂಕಗಳು ಹೇಳುತ್ತವೆ. ಹೀಗಾಗಿ ನಾವು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿದ್ದೇವೆ. ಈ ಮೂಲಕ ಇತರರಿಗೆ ಸ್ಫೂರ್ತಿ ನೀಡುವುದು ನಮ್ಮ ಕಾರ್ಯಕ್ರಮದ ಉದ್ದೇಶ ಎಂದರು.

ಉತ್ತಮ ಅಂಕ ಗಳಿಸಿರುವ ವಿದ್ಯಾರ್ಥಿಗಳು ಅವರ ತಂದೆ ತಾಯಿಗೆ ಮಾತ್ರವಲ್ಲ ಇಡೀ ಕ್ಷೇತ್ರಕ್ಕೆ ಗೌರವ ತಂದಿದ್ದಾರೆ. ಈ ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿದ್ದು, ಸಮಾಜಕ್ಕಾಗಿ ಉತ್ತಮ ಕೊಡುಗೆಗಳನ್ನು ನೀಡಲಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಹೆಚ್ಚಿನ‌ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಪ್ರಶಸ್ತಿ ಸ್ವೀಕರಿಸುತ್ತಿರುವುದು ಸಂತಸ ತಂದಿದೆ. ಅವರಿಗೆ ಉತ್ತಮ ಅವಕಾಶಗಳನ್ನು ನೀಡಿದರೆ ದೇಶದ ಅಭಿವೃದ್ಧಿಯ ವೇಗ ಮತ್ತಷ್ಟು ಹೆಚ್ಚುತ್ತದೆ. ಹೀಗಾಗಿ ಪೋಷಕರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು, ಅವರಿಗೂ ಉತ್ತಮ ಅವಕಾಶಗಳನ್ನು ನಿರ್ಮಿಸಿಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಪೋಷಕರಲ್ಲಿ ಮನವಿ ಮಾಡಿದರು.

ಗ್ಯಾರಂಟಿ ಉಳಿತಾಯದ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವ್ಯಯಿಸಿ:

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಿಂದ ಕುಟುಂಬಗಳು ಉಳಿಸುವ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವ್ಯಯಿಸಬೇಕು ಎಂದು ಸಚಿವ ಕೃಷ್ಣಭೈರೇಗೌಡ ಪೋಷಕರಲ್ಲಿ ಮನವಿ ಮಾಡಿದರು. ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಮಾತು ನೀಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದೆವು. ಇದೀಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಎರಡೇ ತಿಂಗಳಲ್ಲಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ.

ಈ ಗ್ಯಾರಂಟಿಗಳಿಂದ ಬಡ-ಮಧ್ಯಮ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣದ ಪೈಕಿ ಕನಿಷ್ಠ ಶೇ.50ರಷ್ಟು ಹಣವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡಿ ಎಂದು ಸಚಿವ ಕೃಷ್ಣಭೈರೇಗೌಡ ಪೋಷಕರಲ್ಲಿ ಕೇಳಿಕೊಂಡರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಬಡ-ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅವರ ಸಂಕಷ್ಟಕ್ಕೆ ಸಹಾಯಹಸ್ತ ಚಾಚುವ ಕೆಲಸಕ್ಕೆ ಮುಂದಾಯಿತು.

ಇದನ್ನೂ ಓದಿ: ಮಗುವಿಗೆ ಡೈಪರ್ ಬಳಸುತ್ತಿದ್ದೀರಿ ಎಂದಾದರೆ, ಈ ಸಲಹೆಗಳ ಬಗ್ಗೆ ಗಮನ ಕೊಡಿ..!

ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನ ಖುಷಿಯಾಗಿದ್ದಾರೆ.‌ ನಾವು ಅಧಿಕಾರಕ್ಕೆ ಬಂದು ನಾಲ್ಕು ವರ್ಷದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವ ಮೂಲಕ  ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಂಡಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News