ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದುಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ(Harsha Murder Case)ಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಜನರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ತೀವ್ರವಾಗಿ ನಡೆಯುತ್ತಿದೆ. ಇದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಶಿವಮೊಗ್ಗ(Shivamogga)ದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ.  ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದು ತಿಳಿಸಿದರು.


ಇದನ್ನೂ ಓದಿ: ಸಿದ್ದರಾಮಯ್ಯ ಹೇಳುವುದೆಲ್ಲವೂ ಸುಳ್ಳು, ಸುಳ್ಳು, ಸುಳ್ಳು: ಬಿಜೆಪಿ ಟೀಕೆ


ಕಾಂಗ್ರೆಸ್ ಅನುಭವದ ಮಾತು


ಶಿವಮೊಗ್ಗದಲ್ಲಿ ನಡೆದಿರುವುದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂಬ ಕಾಂಗ್ರೆಸ್(Congress) ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಈ ಮಾತುಗಳು ಆಡಿದ್ದಾರೆ ಎಂದರು. ದೆಹಲಿ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ‘ಸದ್ಯಕ್ಕೆ ದೆಹಲಿಗೆ ಹೋಗುವ ಉದ್ದೇಶ ಇಲ್ಲ’ ಎಂದರು.


ಎಲ್ಲಾ ಮಾದರಿಯಲ್ಲೂ ತನಿಖೆ ನಡೆಯುತ್ತಿದೆ


ಪ್ರಕರಣ ಸಂಬಂಧ ಎಲ್ಲಾ ಮಾದರಿಯಲ್ಲೂ ತನಿಖೆ ನಡೆಯುತ್ತಿದೆ. ಇನ್ನುಳಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಅಂತಾ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿದ್ದಾರೆ. ಇಬ್ಬರು ಎಡಿಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಪಡೆಯಿಂದ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಎಲ್ಲವೂ ಹತೋಟಿಯಲ್ಲಿದ್ದು, ಪರಿಸ್ಥಿತಿ ಯಥಾಸ್ಥಿತಿಗೆ ಮರಳಿದೆ. ಹೀಗಾಗಿ ನಾನು ಶಿವಮೊಗ್ಗ(Shivamogga)ದ ಜನತೆಗೆ ಧನ್ಯವಾದ ಹೇಳುತ್ತೇನೆ. ಸಮಯಕ್ಕೆ ಸರಿಯಾಗಿ ಕಾರ್ಯಪ್ರವೃತರಾದ ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಅಂತಾ ಹೇಳಿದ್ದಾರೆ.


ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳಿಂದ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ: ಎಚ್​ಡಿಕೆ ಆಕ್ರೋಶ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.