Darshan Arrest: ದರ್ಶನ್‌, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ- ಗೃಹ ಸಚಿವ ಡಾ. ಜಿ ಪರಮೇಶ್ವರ್

Darshan Arrest: ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು:  ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದೇನು? 

Written by - Yashaswini V | Last Updated : Jun 12, 2024, 12:43 PM IST
  • ಕಾನೂನು ಎಲ್ಲರಿಗೂ ಒಂದೇ, ಪರಮೇಶ್ವರ್ ಗೂ ಒಂದೇ, ದರ್ಶನ್ ಗೂ ಒಂದೇ
  • ದರ್ಶನ್ ಅವ್ರು ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು‌ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ
  • ತನಿಖೆ ಆಧಾರದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ
Darshan Arrest: ದರ್ಶನ್‌, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ-  ಗೃಹ ಸಚಿವ ಡಾ. ಜಿ ಪರಮೇಶ್ವರ್  title=

Darshan Arrest: ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್, ಕಾನೂನು ಎಲ್ಲರಿಗೂ ಒಂದೇ. ಪರಮೇಶ್ವರ್ ಗೂ ಒಂದೇ, ದರ್ಶನ್ ಗೂ ಒಂದೇ... ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು.  

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr G Parameshwar), ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 

ಇದನ್ನೂ ಓದಿ- Darshan Arrest Live Updates: ದರ್ಶನ್ ಅರೆಸ್ಟ್...ಮೊದಲ ಬಾರಿಗೆ ಬೇಸರ ಹೊರ ಹಾಕಿದ ಪತ್ನಿ ವಿಜಯಲಕ್ಷ್ಮಿ

ಹತ್ಯೆಗೀಡಾದ ವ್ಯಕ್ತಿ ರೇಣುಕಾಸ್ವಾಮಿ ನಟ ದರ್ಶನ್ (Actor Darshan) ಅವರ ಆಪ್ತೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ  ಕೆಟ್ಟದಾಗಿ ಫೋಸ್ಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಇದೀಗ ಈ ಕೂತಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕೊಲೆಯಾಗಿರುವ ರೇಣುಕಾಸ್ಚಾಮಿ ಕುಟುಂಬದವರ ಜೊತೆ ಸರ್ಕಾರ ನಿಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ನಾನು ಸಿಎಂ ಜೊತೆ  ಮಾತನಾಡಿ, ಅವರಿಗೆ ಯಾವ ರೀತಿಯಲ್ಲಿ ನೆರವಾಗಬಹುದು ಎಂದು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

ಇದನ್ನೂ ಓದಿ- ನಟ ದರ್ಶನ ಮಾಡಿರುವುದು ಹೇಯ ಕೃತ್ಯ: ಸಂಸದ ಜಗದೀಶ್ ಶೆಟ್ಟರ್

ಪ್ರಕರಣದಿಂದ ಬಚಾವಾಗಲು ಪ್ರಭಾವಿ ರಾಜಕಾರಣಿಗಳಿಂದ ಕರೆ: 
ಇನ್ನೂ ರೇಣುಕಾಸ್ವಾಮಿ ಕೊಲೆ ಆರೋಪದ ಪ್ರಕರಣದಿಂದ ಬಚಾವಾಗಳು ನಟ ದರ್ಶನ್ ಪ್ರಭಾವಿ ರಾಜಕಾರಣಿಗಳಿಂದ ಕರೆ ಮಾಡಿಸಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ನನಗೆ ಗೊತ್ತಿದ್ದಂಗೆ ಯಾರೂ ಸಹ ಪ್ರಯತ್ನ ಮಾಡಿಲ್ಲ. ನನ್ನ ಹತ್ತಿರ ಅಂತೂ ಯಾರು ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳೋಕೆ ಅವಕಾಶವಿದೆಯೋ ಪೊಲೀಸರು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ. ಸರ್ಕಾರದಿಂದ ನಾವ್ಯಾರು ಮಧ್ಯಪ್ರವೇಶ ಮಾಡಲ್ಲ. ಸರ್ಕಾರ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ ಎಂದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News