Hassan Lok Sabha Election Result 2024: 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಹೊಡೆತ: ಶ್ರೇಯಸ್ ಪಟೇಲ್ ಗೆಲುವು- ಪ್ರಜ್ವಲ್ ರೇವಣ್ಣಗೆ ಸೋಲು

Hassan Lok Sabha Election Result 2024: 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಡಿಚ್ಚಿ ಹೊಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಇದುವರೆಗೆ 6,72, 988 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಪಡೆದು ಸೋಲಿನ ರುಚಿ ಕಂಡಿದ್ದಾರೆ.

Written by - Bhavishya Shetty | Last Updated : Jun 4, 2024, 05:19 PM IST
    • 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಡಿಚ್ಚಿ
    • ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು
    • ಹಾಸನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಕಾರ್ಯಕರ್ತರ ಸಂಭ್ರಮಾಚರಣೆ
Hassan Lok Sabha Election Result 2024: 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಹೊಡೆತ: ಶ್ರೇಯಸ್ ಪಟೇಲ್ ಗೆಲುವು- ಪ್ರಜ್ವಲ್ ರೇವಣ್ಣಗೆ ಸೋಲು title=
Shreyas Patel

Hassan Lok Sabha Election Result 2024: 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಡಿಚ್ಚಿ ಹೊಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಇದುವರೆಗೆ 6,72, 988 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಪಡೆದು ಸೋಲಿನ ರುಚಿ ಕಂಡಿದ್ದಾರೆ. ಇನ್ನು 25 ವರ್ಷಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅರಳಿದ ಕಮಲ: ಕ್ಯಾ.ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು

ಭಾರತ ಸ್ವತಂತ್ರ್ಯವಾಗಿ 1951ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಹಾಸನ ಕ್ಷೇತ್ರ ಅಸ್ತಿತ್ವದಲ್ಲಿದೆ. ಆರಂಭದಲ್ಲಿ ಹಾಸನ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಎಂದು ಹೆಸರಾಗಿತ್ತು. ಇದುವರೆಗಿನ ಇತಿಹಾಸವನ್ನೊಮ್ಮೆ ನೋಡಿದರೆ, ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಬಾರಿ ಗೆದ್ದಿರುವುದು ಕಾಂಗ್ರೆಸ್ ಅಭ್ಯರ್ಥಿಗಳು.

ಇನ್ನೊಂದೆಡೆ ಈ ಬಾರಿ NDA ಮೈತ್ರಿ ಕೂಟವು ಇಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಅವರ ವಿರುದ್ಧ ಕಾಂಗ್ರೆಸ್’ನ ಶ್ರೇಯಸ್ ಪಟೇಲ್ ನಿಂತಿದ್ದರು. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ನಾಯಕರಾದ ಜಿ. ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ನಡುವೆ ಪೈಪೋಟಿ ನಡೆದಿತ್ತು ಎಂದೇ ಹೇಳಬಹುದು.

ಇದನ್ನೂ ಓದಿ: Haveri Lok Sabha Election 2024: ಬೊಮ್ಮಾಯಿ VS ಗಡ್ಡದೇವರಮಠ, ಯಾರಿಗೆ ಏಲಕ್ಕಿ ಹಾರ..?

ಕಾಂಗ್ರೆಸ್ ನಾಯಕರಾದ ಜಿ. ಪುಟ್ಟಸ್ವಾಮಿಗೌಡರವರು 1985ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು. ಅಷ್ಟೇ ಅಲ್ಲದೆ, 1989, 1999ರ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News