Hassan Pen Drive Case: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಜೂನ್ 6ರವರೆಗೆ SIT ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ, ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ, ನನ್ನ ವಿರುದ್ಧ ದೂರು ನೀಡಿರುವ ಮಹಿಳೆ ಯಾರೆಂದು ನನಗೆ ತಿಳಿದಿಲ್ಲ. ನಾನವನಲ್ಲ... ನಾನವನಲ್ಲ... ಎಂದು ಹೇಳಿದ್ದಾರೆಂದು ತಿಳಿದುಬಂದದೆ.
ಹಾಸನದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣನಿಗೆ SIT ಅಧಿಕಾರಿಗಳು ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನಿಸಿದರೂ ಪ್ರಜ್ವಲ್ ರೇವಣ್ಣ ಗೊಂದಲದ ಹೇಳಿಕೆ ಕೊಟ್ಟು ಮೌನಕ್ಕೆ ಶರಣಾಗುತ್ತಿದ್ದಾರೆಂದು ತಿಳಿದುಬಂದಿದೆ. SIT ಅಧಿಕಾರಿಗಳು ಜಾಣ ನಡೆ ತೋರಿ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುವ ಮೂಲಕ ಪ್ರಜ್ವಲ್‌ರಿಂದ ತನಿಖೆಗೆ ಬೇಕಿರುವ ಉತ್ತರಗಳನ್ನು ಬಾಯಿ ಬಿಡಿಸಲು ಯತ್ನಿಸುತ್ತಿದ್ದಾರಂತೆ. ಆದರೆ ಆರೋಪಿ ಸ್ಥಾನದಲ್ಲಿರುವ ಸಂಸದ ಪ್ರಜ್ವಲ್ ತನಗೇನೂ ಗೊತ್ತೇ ಇಲ್ಲ ಅಂತಾ ಸಮರ್ಥಿಸಿಕೊಳ್ಳುತ್ತಿದ್ದಾರಂತೆ.
ಇದನ್ನೂ ಓದಿ: ಎಸ್ಐಟಿ ವಶದಲ್ಲಿ ಪ್ರಜ್ವಲ್...! ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಚಾಲೆಂಜ್
ಪ್ರಜ್ವಲ್‌ನನ್ನು ಕುರ್ಚಿಯಲ್ಲಿ ಕೂರಿಸಿ SITಯ ಕೆಲವು ತನಿಖಾಧಿಕಾರಿಗಳು ಒಬ್ಬರ ಮೇಲೊಬ್ಬರಂತೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಪ್ರಜ್ವಲ್ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲವೆಂದೇ ಹೇಳಿ ಮೌನಕ್ಕೆ ಶರಣಾಗುತ್ತಿದ್ದಾರಂತೆ. ತಮ್ಮನ್ನು ತಾವೇ ಸಮರ್ಥಿಸಿಕೊಂಡಿರುವ ಪ್ರಜ್ವಲ್, ನನ್ನ ವಿರುದ್ಧ ದೂರು ನೀಡಿದ ಮಹಿಳೆ ಯಾರು ಅಂತಾನೇ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಕೆಲಸಕ್ಕೆ ಎಷ್ಟು ಜನರಿದ್ದಾರೆ ಅನ್ನೋದು ನಿಖರವಾಗಿ ಗೊತ್ತಿಲ್ಲ. ತೋಟದ ಮನೆ, ಹಾಸನ, ಬೆಂಗಳೂರಿನಲ್ಲಿ ಅನೇಕ ಮಂದಿ ಕೆಲಸದವರಿದ್ದಾರೆ. ಇದರಲ್ಲಿ ಯಾರು ನನ್ನ ವಿರುದ್ಧ ದೂರು ಕೊಟ್ಟವರು? ಏನೆಂದು ದೂರು ನೀಡಿದ್ದಾರೆ? ಅಂತಾ ಪ್ರಜ್ವಲ್ ಅವರೇ SIT ಅಧಿಕಾರಿಗಳನ್ನು ಮರುಪ್ರಶ್ನಿಸಿದ್ದಾರೆ. ಪ್ರಜ್ವಲ್ ಪ್ರಶ್ನೆಯಿಂದ SIT ಅಧಿಕಾರಿಗಳೇ ಒಂದು ಕ್ಷಣ ತಬ್ಬಿಬ್ಬುಗೊಂಡಿದ್ದಾರಂತೆ.
ಹೊಳೆನರಸೀಪುರ ಠಾಣೆಯಲ್ಲಿ ದೂರು ನೀಡಿರುವ ಸಂತ್ರಸ್ತೆಯ ಫೋಟೋ ತೋರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ SIT ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಪ್ರಜ್ವಲ್, ಅವರು ಯಾರು ಎಂಬುದೇ ನನಗೆ ತಿಳಿದಿಲ್ಲ. ನಾನು ಇವರನ್ನು ನೋಡಿದ ನೆನಪಿಲ್ಲ. ನಾನು ಹೆಚ್ಚಾಗಿ ಹಾಸನ, ಬೆಂಗಳೂರು, ದೆಹಲಿಯಲ್ಲಿರುತ್ತೇನೆ. ಕೆಲಸದವರನ್ನೆಲ್ಲ ನಾನು ಅಷ್ಟೊಂದು ಗಮನಿಲ್ಲವೆಂದು ಹೇಳಿದ್ದಾರೆ. ಸಂತ್ರಸ್ತೆಗೆ ದೌರ್ಜನ್ಯ ಎಸಗಿರುವುದಕ್ಕೆ ಸಂಬಂಧಿಸಿದ ಕೆಲವು ಸಾಕ್ಷ್ಯಗಳನ್ನು ತೋರಿಸಿದಾಗ ಪ್ರಜ್ವಲ್ ಯಾವುದೇ ರೀತಿ ಆತಂಕಕ್ಕೆ ಒಳಗಾಗಿಲ್ಲವಂತೆ. ಇವರಿಗೆಲ್ಲ ನಾನು ಯಾಕೆ ಹಾಗೆ ಮಾಡಬೇಕು. ೪ ವರ್ಷಗಳ ಹಿಂದೆ ಈ ಘಟನೆ ನಡೆದಿದೆ ಎನ್ನುತ್ತಾರೆ. ಆಗಲೇ ದೂರು ಕೊಡಬಹುದಿತ್ತಲ್ಲ ಅಂತಾ ಮರುಪ್ರಶ್ನಿಸಿದ್ದಾರೆ ಎನ್ನಲಾಗಿದೆ. SIT ಅಧಿಕಾರಿಗಳಿಗೆ ಪ್ರಜ್ವಲ್ ಮರುಪ್ರಶ್ನೆ ಕೇಳಿ ಅವರಿಗೆ ಚಮಕ್ ಕೊಡುತ್ತಿದ್ದಾರೆಂದು ತಿಳಿದುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ SIT ಎಲ್ಲಾ ಆಯಾಮಲ್ಲಿಯೂ ತನಿಖೆ ಕೈಗೊಂಡಿದೆ. ಈ ಬಗ್ಗೆ ಪ್ರಜ್ವಲ್‌ರನ್ನು ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ: Prajwal Revanna Arrest: ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದು ಏಕೆ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ