Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್‌.ಡಿ.ರೇವಣ್ಣ!

Hassan PenDrive Case: ಪ್ರಕರಣ ಸಂಬಂಧ ಹೊಳೆನರಸೀಪುರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ʼವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್‌ ನೀಡಿದೆ. ಏನೇ ಬಂದರೂ ನಾವು ಎದುರಿಸುತ್ತೇವೆ. ಎಲ್ಲವೂ ಸರಿ ಹೋಗಲಿದೆ ಅನ್ನೋ ವಿಶ್ವಾಸವಿದೆʼ ಅಂತಾ ಹೇಳಿದ್ದಾರೆ. ​

Written by - Puttaraj K Alur | Last Updated : May 1, 2024, 03:25 PM IST
  • ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್‌ ನೀಡಿದೆ
  • ಏನೋ ಬಂದರೂ ನಾವು ಧೈರ್ಯವಾಗಿ ಎದುರಿಸುತ್ತೇವೆ
  • ಎಲ್ಲವೂ ಸರಿ ಹೋಗಲಿದೆ ಅನ್ನೋ ವಿಶ್ವಾಸವಿದೆ ಎಂದ ರೇವಣ್ಣ
Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್‌.ಡಿ.ರೇವಣ್ಣ! title=
ಧೈರ್ಯವಾಗಿ ಎದುರಿಸುತ್ತೇವೆಂದ ರೇವಣ್ಣ!

ಬೆಂಗಳೂರು: ಅಶ್ಲೀಲ ವಿಡಿಯೋ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.​ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್​ ರೇವಣ್ಣರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ನೋಟಿಸ್​ ನೀಡಿದೆ. ಸದ್ಯ ಪೆನ್‌ಡ್ರೈವ್‌ ಮೂಲಕ ಲೀಕ್‌ ಆಗಿರುವ ವಿಡಿಯೋಗಳ ಪರಿಶೀಲನೆಗೆ SIT ಪ್ರತ್ಯೇಕ ತಂಡವನ್ನು ರಚಿಸಿದೆ. 

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಅವರ ತಂದೆ ಎಚ್‌.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ರೇವಣ್ಣ A1 ಆಗಿದ್ದರೆ, ಪ್ರಜ್ವಲ್ A2 ಆರೋಪಿಯಾಗಿದ್ದಾರೆ.

ಇದನ್ನೂ ಓದಿ:  ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ

ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ. ಹಲವು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದವು. ಹೀಗಾಗಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದರು.

ಇನ್ನು ಮಹಿಳಾ ಅಧಿಕಾರಿಗಳಾದ SP ಸೀಮಾ ಲಾಟ್ಕರ್ ಮತ್ತು DySP ಪ್ರಭಾವತಿ ಅವರು ಒಟ್ಟು ೧೦ ಸಂತ್ರಸ್ತೆಯರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ SIT ತಂಡವು ಗೌಪ್ಯವಾಗಿ ಸಂತ್ರಸ್ತೆಯರ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. 

ಎಲ್ಲವೂ ಸರಿಯಾಗಲಿದೆ ಎಂದ ರೇವಣ್ಣ!

ಇನ್ನು ಪ್ರಕರಣ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ, ʼವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್‌ ನೀಡಿದೆ. ಅದರಲ್ಲಿ ಏನಿದೆ ಅಂತಾ ನೋಡುತ್ತೇನೆ. ಏನೇ ಬಂದರೂ ನಾವು ಎದುರಿಸುತ್ತೇವೆ. ಎಲ್ಲವೂ ಸರಿ ಹೋಗಲಿದೆʼ ಅನ್ನೋ ವಿಶ್ವಾಸವಿದೆ ಅಂತಾ ಹೇಳಿದ್ದಾರೆ. 

ಇದನ್ನೂ ಓದಿ: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ - ಜೋಶಿ ಲೇವಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News