ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ನನಗೆ ಅನುಕಂಪವಿದೆ. ಅವರ ರಾಜೀನಾಮೆಗೆ ಕಾರಣವೇನು ಅನ್ನೋದನ್ನು ಬಹಿರಂಗಪಡಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ(BS Yediyurappa) ಸೋಮವಾರ ರಾಜೀನಾಮೆ ನೀಡಿದ ಬಳಿಕ ಟ್ವೀಟ್ ಮಾಡಿರುವ ಅವರು, ‘ಈ ರಾಜೀನಾಮೆ ನಿರೀಕ್ಷಿತವಾದದು. ಹಿಂದೆಯೇ ನಾನು ಹೇಳಿರುವುದು ನಿಜವಾಗಿದೆ. ಈ ಬಗ್ಗೆ ಸಂಭ್ರಮ ಪಡುವಂತಹದ್ದೇನೂ ಇಲ್ಲ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು. ಆ ದಿನಗಳು ಸದ್ಯದಲ್ಲಿಯೇ ಬರಲಿದೆ’ ಅಂತಾ ಹೇಳಿದ್ದಾರೆ.


ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ


‘ಬಿಎಸ್​ವೈ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ. ಬಿಎಸ್​ವೈ ಹೋದರೂ, ಇನ್ನೊಬ್ಬರು ಬಂದರೂ ಬಿಜೆಪಿಯ ಭ್ರಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ‘ಆಪರೇಷನ್ ಕಮಲ’(Operation Lotus) ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ’ ಅಂತಾ ಟ್ವೀಟ್ ಮಾಡಿದ್ದಾರೆ. 


Siddaramaiah)ಪ್ರಶ್ನಿಸಿದ್ದಾರೆ.


ಸಿಎಂ ಹುದ್ದೆಗೆ ರಾಜೀನಾಮೆ ಬಿಗ್ ಟ್ವಿಸ್ಟ್ ನೀಡಿದ ಸಿಎಂ ಯಡಿಯುರಪ್ಪ


‘BJP ಎಂದರೆ ಭ್ರಷ್ಟಾಚಾರ ಜಾರಿ ಪಾರ್ಟಿ’. ಬಿಎಸ್​ವೈ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ. ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂದು ಹೇಳುತ್ತಿರುವ ಪ್ರಧಾನಿ ಮೋದಿ(Narendra Modi)ಯವರಿಗೆ ಒಂದಿಷ್ಟು ಮರ್ಯಾದೆ ಇದ್ದರೆ, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ’ ಅಂತಾ ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ