HC Notice To BSY: ಬಿ.ಎಸ್ ಯಡಿಯೂರಪ್ಪ (BS Yadiyurappa) ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಿದ್ದಂತೆ ಮತ್ತೆ ಅವರಿಗೆ ಸಂಕಷ್ಟಗಳು ಎದುರಾಗಿವೆ.  ಕರ್ನಾಟಕ ಹೈಕೋರ್ಟ್ (Karnataka High Court) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Corruption Case) ಬಿಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಕಳುಹಿಸಿದೆ. ಕರ್ನಾಟಕ ಹೈಕೋರ್ಟ್ ಮಂಗಳವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra), ಅವರ ಕುಟುಂಬ ಸದಸ್ಯರು, ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು IAS ಅಧಿಕಾರಿಯ ವಿರುದ್ಧ ನೋಟಿಸ್ ಜಾರಿಗೊಳಿಸಿದೆ.


COMMERCIAL BREAK
SCROLL TO CONTINUE READING

ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ (Justice S.Sunil Dutt Yadav) ಅವರ ಏಕ ಸದಸ್ಯ ಪೀಠ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ಅವರ ಅರ್ಜಿಯ ಮೇಲೆ ಇವರೆಲ್ಲರ ವಿರುದ್ಧ ನೋಟಿಸ್ ಜಾರಿಗೊಳಿಸಲು ಆದೇಶ ನೀಡಿದೆ . ಈ ವರ್ಷ ಜುಲೈ 8 ರಂದು ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶವನ್ನು ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿಶೇಷ ನ್ಯಾಯಾಲಯವು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಂದಿನ ಸಚಿವ ಸೋಮಶೇಖರ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ಪ್ರಕರಣವನ್ನು ವಜಾಗೊಳಿಸಿದ್ದು ಇಲ್ಲಿ ಗಮನಾರ್ಹ.


ಈ ಪ್ರಕರಣವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (Bengaluru Development Authority) ವಸತಿ ಯೋಜನೆಗೆ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddharamaiah) ಅವರು ಅವಿಶ್ವಾಸ ಗೊತ್ತುವಳಿ ಸೂಚನೆ ನೀಡಿದಾಗ ಮತ್ತು ಕೆಲವು ಗಂಭೀರ ಆರೋಪಗಳನ್ನು ಮಾಡಿದಾಗ ಈ ವಿಷಯವನ್ನು ಕರ್ನಾಟಕ ವಿಧಾನ ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಇದೆ ವೇಳೆ  ಯಡಿಯೂರಪ್ಪ ಮತ್ತು ಅವರ ಪುತ್ರ ಈ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿದ್ದಾರೆ, ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ. 


ಇದನ್ನೂ ಓದಿ-Karnataka Cabinet Expansion: ಇಂದು ಸಂಜೆ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ


ಈ ಪ್ರಕರಣ ಬೆಂಗಳೂರಿನಲ್ಲಿ ರೂ.662 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪಾರ್ಟ್ಮೆಂಟ್ ವೊಂದಕ್ಕೆ  ಸಂಬಂಧಿಸಿದೆ. ಈ ಹಿಂದೆ ಹಲವಾರು ಕಾಂಗ್ರೆಸ್ ನಾಯಕರು ಯಡಿಯೂರಪ್ಪ, ಅವರ ಪುತ್ರ, ಅಳಿಯ ಮತ್ತು ಮೊಮ್ಮಗನಂತಹ ಹತ್ತಿರದ ಸಂಬಂಧಿಗಳು ಈ ಯೋಜನೆಯಲ್ಲಿ ಭ್ರಷ್ಟಾಚಾರ ಮತ್ತು ಲಂಚದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸುತ್ತಿದ್ದರು. ಕೋಲ್ಕತ್ತಾದ ನಕಲಿ ಕಂಪನಿಯ ಮೂಲಕ ಲಂಚ ಕೇಳಲಾಗಿದೆ ಮತ್ತು ಹಬ್ನ ಪಾವತಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ವಿಷಯದಲ್ಲಿ ಕಾಲಕಾಲಕ್ಕೆ ತನಿಖೆಯ ಬೇಡಿಕೆಯನ್ನೂ ಸಹ ಕೋರಲಾಗಿದೆ.


ಇದನ್ನೂ ಓದಿ-ಅನಾಥೆಯನ್ನು ಮಗಳಂತೆ ಸಾಕಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ!


ಕೆಲ ದಿನಗಳ ಹಿಂದೆಯಷ್ಟೇ  ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಪಟ್ಟ ಕಳೆದುಕೊಂಡಿದ್ದಾರೆ.. ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಜುಲೈ 28 ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. 26 ಜುಲೈ 2019 ರಂದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿ ಉರುಳಿದ ಬಳಿಕ  ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ ಇದೀಗ ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ನಂತರ, ಬಿಎಸ್ ಯಡಿಯೂರಪ್ಪನವರಿಗೆ ಸಂಕಷ್ಟಗಳು ಎದುರಾಗುತ್ತಿರುವ ಸಂಕೇತಗಳು ದೊರೆಯಲಾರಂಭಿಸಿವೆ ಎಂದರೆ ತಪ್ಪಾಗಲಾರದು.


ಇದನ್ನೂ ಓದಿ-Karnataka Weather: ರಾಜ್ಯದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ