5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್ಡಿಕೆ
ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.
ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.
ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ ನೀಡಿರುವ ಇಬ್ಬರೂ ನಾಯಕರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಮುಖಂಡರ ಜತೆ ಆತ್ಮಾವಲೋಕನ ಸಭೆಗಳನ್ನು ನಡೆಸಿದರು.ಬೆಳಗ್ಗೆಯಿಂದಲೇ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಒಂದೊಂದೇ ಜಿಲ್ಲೆಯ ಸರಣಿ ಸಭೆಗಳನ್ನು ನಡೆಸಿದ ವರಿಷ್ಠರು, ಎಲ್ಲಾ ಜಿಲ್ಲಾ ಮುಖಂಡರಿಗೆ ಕೆಲ ಮಹತ್ವದ ಅಂಶಗಳ ಬಗ್ಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ: ಯತ್ನಾಳ್ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು
ಮಾಜಿ ಪ್ರಧಾನಿಗಳು ಹೇಳಿದ್ದು;
ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಜತೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯು ಬರುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆಯೂ ನಡೆಯಲಿದೆ. ನಮ್ಮ ಗುರಿ ಈ ಚುನಾವಣೆಗಳೇ ಆಗಿರಬೇಕು. ಇದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ಮಾಡಬೇಕು ಹಾಗೂ ಜನರ ಜತೆ ಇದ್ದು ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ತಾಲೂಕು, ಜಿಲ್ಲಾ ಸಮಿತಿಗಳು ಬದ್ಧತೆಯಿಂದ ದುಡಿಮೆ ಮಾಡಬೇಕು.ನಮ್ಮ ಪಕ್ಷಕ್ಕೆ ಎಲ್ಲಿ ನೆಲೆ ಇದೆ ಎನ್ನುವುದು ನಮಗೆ ಗೊತ್ತಿದೆ. ಆ ನೆಲೆಯನ್ನು ಭದ್ರ ಮಾಡಿಕೊಂಡು ಅದನ್ನು ವಿಸ್ತರಿಸಬೇಕು. ಅದಕ್ಕೆ ನಾವು ತುರ್ತಾಗಿ ಮಾಡಬೇಕಿರುವ ಕೆಲಸ ಎಂದರೆ ಹಿರಿಯರ ಜತೆಗೆ ಯುವಕರಿಗೂ ಜವಾಬ್ದಾರಿ ನೀಡಬೇಕು. ಪ್ರಮುಖ ಜವಾಬ್ದಾರಿಗಳನ್ನು ಯುವಕರಿಗೆ ನೀಡಬೇಕು.ಅಷ್ಟೇ ಅಲ್ಲ, ಯುವಕರ ಬಗ್ಗೆ ಹಿರಿಯರು ಪ್ರೀತಿ, ಔದಾರ್ಯತೆಯಿಂದ ವರ್ತಿಸಬೇಕು. ಜಿಲ್ಲಾ ಘಟಕಗಳಲ್ಲಿ ಮಾರ್ಪಾಡು ಹಾಗೂ ಸುಧಾರಣೆಗಳನ್ನು ನಾವು ತರಬೇಕಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ
ಈ ಸೋಲು ದೊಡ್ಡ ಗೆಲುವಿಗೆ ನಾಂದಿ:
ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನೆಡೆ ಆಗಿದೆ ನಿಜ, ಆದರೆ; ಈ ಸೋಲು ಮುಂದೆ ದೊಡ್ಡ ಗೆಲುವಿಗೆ ನಾಂದಿ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ಹೇಳಿ ಜನರಿಗೆ ಯಾಮಾರಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಜನರ ಜತೆ ಪ್ರಾಮಾಣಿಕವಾಗಿ ನಿಂತರೆ ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ.ಇಂಥ ಎಷ್ಟೋ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ.1989ರಲ್ಲಿ ದೇವೇಗೌಡರು ಎರಡು ಕಡೆ ಸೋತರು.ಅದಾದ ಐದು ವರ್ಷದಲ್ಲಿ ಪಕ್ಷ ಪೂರ್ಣ ಪಡೆದು ಅವರು ಮುಖ್ಯಮಂತ್ರಿ ಆದರು. ಆ ಮೇಲೆ ಲೋಕಸಭೆ ಚುನಾವಣೆಯಲ್ಲಿ 16 ಕ್ಷೇತ್ರ ಗೆದ್ದು ದೇವೇಗೌಡರು ದೇಶದ ಪ್ರಧಾನಿಯೂ ಆದರು. 1999ರಲ್ಲಿ ನಮ್ಮ ಪಕ್ಷಕ್ಕೆ ಹತ್ತೇ ಕ್ಷೇತ್ರಗಳು ಬಂದವು. ನಂತರದ ಚುನಾವಣೆಯಲ್ಲಿ 58 ಶಾಸಕರನ್ನು ಗೆದ್ದಿತ್ತು. 2013ರಲ್ಲಿ 40 ಕ್ಷೇತ್ರಗಳಲ್ಲಿ ಪಕ್ಷ ಗೆದ್ದಿತ್ತು. ಇದೆಲ್ಲವನ್ನೂ ನಾವು ಅರ್ಥ ಮಾಡಿಕೊಳ್ಳಬೇಕು.
ಆತ್ಮಾವಲೋಕನ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರು ಸೇರಿದಂತೆ ಅಷ್ಟೂ ಜಿಲ್ಲೆಗಳ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.