ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಬಿಜೆಪಿ ಜತೆಶಾಮೀಲು - ಹೆಚ್.ಡಿ.ದೇವೇಗೌಡರು

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿದ್ದಾರಂದು ಹೇಳಿದರು.  

Written by - Zee Kannada News Desk | Last Updated : Jun 6, 2023, 06:40 PM IST
ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಬಿಜೆಪಿ ಜತೆಶಾಮೀಲು - ಹೆಚ್.ಡಿ.ದೇವೇಗೌಡರು  title=

ಬೆಂಗಳೂರು: ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿದ್ದಾರಂದು ಹೇಳಿದರು.  

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ ಅವರು  ಮೇಲಿನಂತೆ ಉತ್ತರಿಸಿದರು.

ಇದನ್ನೂ ಓದಿ: ತಮ್ಮನ ಮೇಲಿನ ಸೇಡು; ಹಂತಕರ ಕೈಯಲ್ಲಿ ಬಲಿಯಾಗಿದ್ದು ಮಾತ್ರ ಅಣ್ಣ !

ಬಳಿಕ ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿದ್ದಾರೆಂದು ಅಭಿಪ್ರಾಯ ಪಟ್ಟಿದ್ದಾರೆ. ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ ಎಂದು ಮರು ಪ್ರಶ್ನೆ ಹಾಕಿದ ಮಾಜಿ ಪ್ರಧಾನಿಗಳು, ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದರು.

ಅನೇಕ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಬಿಜೆಪಿ ಪಕ್ಷದ ಜತೆಗೆ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಅವರು ಖಾರಬಾಗಿ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News