ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನಿಂದಾಗಿ ರಾಹುಲ್ ಗಾಂಧಿ ಮನಸ್ಸಿಗೆ ನೋವಾಗಿ ರಾಜೀನಾಮೆ ನೀಡಿರಬಹುದು ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಹುಲ್​ ಗಾಂಧಿ ರಾಜೀನಾಮೆ ನೀಡಿರುವ ವಿಚಾರವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ನಾನು ಸಂಸತ್ತು ಪ್ರವೇಶಿಸಿದ ದಿನದಿಂದ ರಾಹುಲ್ ಗಾಂಧಿ ಹೇಗೆ ಎಂಬುದು ತಿಳಿದಿದ್ದೇನೆ. ಅವರಲ್ಲಿ ಉತ್ಸಾಹ ಇದೆ, ಫೈಟಿಂಗ್ ನೇಚರ್ ಇದೆ. ಆದರೂ ಚುನಾವಣೆಯಲ್ಲಿ ಸೋತಿದ್ದರಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. 


ಇದೇ ವೇಳೆ, ರಾಹುಲ್ ಗಾಂಧಿ ರಾಜೀನಾಮೆಯಿಂದಾಗಿ ಕಾಂಗ್ರೆಸ್ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡಿದರೂ ಸಹ ರಾಹುಲ್ ಗಾಂಧಿಯವರೇ ಜವಾಬ್ದಾರಿ ಹೊರಬೇಕು. ಆಗ ಮಾತ್ರ ಪಕ್ಷಕ್ಕೆ ಒಂದು ಕಳೆ ಇರುತ್ತದೆ ಎಂದು ದೇವೇಗೌಡರು ಹೇಳಿದರು.