ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಲು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ನಿರಾಕರಿಸಿದ್ದು, ಸೋಮವಾರದವರೆಗೆ ಏನೂ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಶಾಸಕರು ರಾಜೀನಾಮೆ ನೀಡಿದ್ದಾರೆ ಎಂಬ ಬಗ್ಗೆ ಹೆಚ್ಚು ಗೊತ್ತಿಲ್ಲ. ಸದ್ಯ ನನ್ನ ಪಕ್ಷದ ಕಚೇರಿಯಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಾಗೂ ಕಾರ್ಪೋರೇಶನ್ ಚುನಾವಣೆಗಳ ಬಗ್ಗೆ ಚರ್ಚಿಸಲು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ನಗರ್ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಇತರರ ಸಭೆ ಕರೆದಿದ್ದೇನೆ ಅಷ್ಟೇ. ಇನ್ನಾವ ವಿಚಾರಗಳ ಬಗ್ಗೆ ಚರ್ಚಿಸಲು ಅಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
11 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಎಂದು ನೀವು ಹೇಳುತ್ತಿದ್ದೀರಿ. ಸದ್ಯ ಶಾಸಕರ ರಾಜೀನಾಮೆ ಚೆಂಡು ಸ್ಪೀಕರ್ ಅಂಗಳದಲ್ಲಿದೆ. ಹಾಗಾಗಿ ಅವರು ಸೋಮವಾರ ರಾಜೀನಾಮೆ ಪತ್ರ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೂ ನಾನೇನೂ ಪ್ರತಿಕ್ರಿಯಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.