ಬೆಂಗಳೂರು: ನಾಳೆ ಮಧ್ಯಾಹ್ನ 2.15ಕ್ಕೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಎಎನ್ಐಗೆ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಗೊಂದಲವಿಲ್ಲ. ನಾನು ತುಮಕೂರಿನಿಂದ ಸ್ಪರ್ಧಿಸಬೇಕು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ಅವರ ತೀರ್ಮಾನಕ್ಕೆ ನಾನೂ ಒಪ್ಪಿದ್ದು, ನಾಳೆ ನಾಮಪತ್ರ ಸಲ್ಲಿಸುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.


ಐದು ವರ್ಷದ ಹಿಂದಷ್ಟೇ ಪರಮೇಶ್ವರ್ ಅವರು ಕಾಂಗ್ರೆಸ್ ನಿಂದ ಕಣಕ್ಕೆ ಇಳಿಸಿದವರಲ್ಲಿ ಮುದ್ದಹನುಮೇಗೌಡರು ಸಹ ಒಬ್ಬರು. ಈ ಸಮಸ್ಯೆ ನಿವಾರಣೆ ಆಗುತ್ತದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಯಾವುದೇ ಬಿಕ್ಕಟ್ಟಿಲ್ಲ. ನಾವು (ಕಾಂಗ್ರೆಸ್-ಜೆಡಿಎಸ್) ಒಟ್ಟಾಗಿ ಹೋರಾಟ ನಡೆಸುತ್ತೇವೆ ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.