ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.
ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು, ಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ:ಟೆರರಿಸ್ಟ್ಗಳು ವಿಲನ್ಸ್ ಆದರೆ ಮುಸ್ಲಿಮರಲ್ಲ..! ʼದಿ ಕೇರಳ ಸ್ಟೋರಿʼ ನಟಿಯ ಹೇಳಿಕೆ ವೈರಲ್
ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದರು ಕುಮಾರಸ್ವಾಮಿ ಅವರು.
ಚಲುವರಾಯಸ್ವಾಮಿಗೆ ತಿರುಗೇಟು : ಪುಟ್ಟರಾಜ ಅವರಿಗೆ ಇನ್ನೂ ಚೆನ್ನಾಗಿರುವ ವಧುವನ್ನೇ ನೋಡೋಣ. ಅವರ ಬಗ್ಗೆ ಬೇರೆಯವರಿಗೆ ಚಿಂತೆ ಬೇಕಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು ಮಾಜಿ ಮುಖ್ಯಮಂತ್ರಿಗಳು. ಮಂಡ್ಯದ ಮೇಲೆ ಕೆಟ್ಟ ದೃಷ್ಟಿ ಬೀಳಬಾರದು ಅಂತ ಅವರು ಹೇಳಿದ್ದಾರೆ. ನನ್ನ ದೃಷ್ಟಿ ಕೆಟ್ಟದ್ದಲ್ಲ. ಅಷ್ಟು ಸಣ್ಣತನದಲ್ಲಿ ಮಾತನಾಡುವುದು ಬೇಡ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ʻಯು ಟರ್ನ್ʼ ಚಿತ್ರದ ನಾಯಕಿಯ ಬಟ್ಟೆ ಮೇಲೆ ಕಾಲಿಟ್ಟ ಅಕ್ಷಯ್ ಕುಮಾರ್: ಮುಜುಗರಕ್ಕೀಡಾದ ನಟಿ!
ಕಾಂಗ್ರೆಸ್ ಅಭ್ಯರ್ಥಿ ಹೆಸರು ಬರಲಿ: ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ನಡೆದಿರುವ ಹೈಡ್ರಾಮಾವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅಲ್ಲಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಹಲವಾರು ರೀತಿಯ ಬೆಳವಣಿಗೆಗಳು ಆಗಿವೆ. ಆದ್ದರಿಂದ ನಾವು ಇನ್ನು ಅಧಿಕೃತ ಘೋಷಣೆ ಮುಂದೂಡಿದ್ದೇವೆ ಅಷ್ಟೇ. ತಾವು ಯಾರನ್ನೂ ತೆಗೆದುಕೊಳ್ಳೋಕೆ ಪ್ರಯತ್ನ ಮಾಡುತ್ತಿಲ್ಲ. ನಮ್ಮಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಪಕ್ಷದಲ್ಲಿ ಶಿಸ್ತಿನಿಂದ ಇರುವವರ ಹೆಸರನ್ನು ಘೋಷಣೆ ಮಾಡುತ್ತೇವೆ. ಯಾವುದೇ ಗೊಂದಲವಿಲ್ಲ. ಆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಗಮನ ಇಟ್ಟಿದ್ದೇವೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು
ಗ್ರೆಸ್ ನಾಯಕರ ಒಳಜಗಳದಿಂದ ಎನ್ ಡಿಎ ಮೈತ್ರಿಕೂಟಕ್ಕೆ ಲಾಭವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ನಮಗೆ ಗೆಲುವು ನಿಶ್ಚಿತ. ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದರು ಅವರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.