ರೈತರ ಮಕ್ಕಳನ್ನು ಮದುವೆಯಾಗುವ ʼಹೆಣ್ಮಕ್ಕಳಿಗೆ 2 ಲಕ್ಷʼ ಪ್ರೋತ್ಸಾಹ ಧನ
ರೈತರ ಮಕ್ಕಳ ಮದುವೆಯಾಗಲು ಹೆಣ್ಣುಮಕ್ಕಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೇಲೂರು : ರೈತರ ಮಕ್ಕಳ ಮದುವೆಯಾಗಲು ಹೆಣ್ಣುಮಕ್ಕಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ಗುರುವಾರ ಬೇಲೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ರಾಹುಲ್ ಗಾಂಧಿ ಒಬ್ಬ ದೇಶದ್ರೋಹಿ, ದೇಶದ ಬಗ್ಗೆ ನಿಯತ್ತು ಇಲ್ಲಾ..
ಅಲ್ಲದೆ, ಈಗಾಗಲೇ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆಗೊಳಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಯೋಜನೆ ಜಾರಿ ನಿಶ್ಚಿತ ಎಂದು ಹೆಚ್‌ಡಿಕೆ ಭರವಸೆ ನೀಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.