ರಮೇಶ್ ಕುಮಾರ್ ವಿರುದ್ಧ ಅಸಭ್ಯ ಪದಬಳಕೆ; ಕ್ಷಮೆಯಾಚಿಸಿದ ಎಚ್‌ಡಿಕೆ

ನನ್ನ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಕುಮಾರಸ್ವಾಮಿ ಕ್ಷೆಮೆಯಾಚಿಸಿದ್ದಾರೆ.

Written by - Puttaraj K Alur | Last Updated : Nov 23, 2022, 02:34 PM IST
  • ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅಸಭ್ಯ ಪದ ಬಳಕೆ
  • ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ
  • ನಾನು ಆಡಿದ ಮಾತನ್ನು ವಾಪಸ್ ಪಡೆಯುತ್ತೇನೆಂದು ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ
ರಮೇಶ್ ಕುಮಾರ್ ವಿರುದ್ಧ ಅಸಭ್ಯ ಪದಬಳಕೆ; ಕ್ಷಮೆಯಾಚಿಸಿದ ಎಚ್‌ಡಿಕೆ title=
ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ಅಸಭ್ಯ ಪದ ಬಳಕೆ ಮಾಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ನಾನು ಆಕ್ರೋಶದಲ್ಲಿ ಮಾತನಾಡಿದ್ದೇನೆ, ಅಪಮಾನ ಮಾಡುವ ಉದ್ದೇಶ ಇರಲಿಲ್ಲ’ವೆಂದು ಹೇಳಿದ್ದಾರೆ.

‘ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ’ ಎಂದು ಕುಮಾರಸ್ವಾಮಿ ಕ್ಷೆಮೆಯಾಚಿಸಿದ್ದಾರೆ.

ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ!

‘ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ  ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು’ ಅಂತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಈ ಆಕ್ರೋಶದ ಹಿನ್ನೆಲೆ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ’ ಎಂದು ಎಚ್‍ಡಿಕೆ ತಿಳಿಸಿದ್ದಾರೆ.

ಇದನ್ನೂ ಓದಿ: Basavaraj Bommai Clarification: “ಬಿಜೆಪಿಯಲ್ಲಿ ಭಿನ್ನಮತವಿಲ್ಲ”.. ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಶ್ರೀನಿವಾಸಪುರ ತಾಲೂಕಿ ಮಾಸ್ತೇನಹಳ್ಳಿ ಗ್ರಾಮದಲ್ಲಿ ಶಿಥಿಲ ಸರ್ಕಾರಿ ಶಾಲೆ ವೀಕ್ಷಣೆ ಬಳಿಕ ಕಾರು ಹತ್ತುವ ವೇಳೆ ರಮೇಶ್ ಕುಮಾರ್ ಅವರ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.

ಎಚ್‍ಡಿಕೆ ಪ್ರವಾಸದ ವೇಳೆ ಮಾಸ್ತೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಶಿಥಿಲ ಕಟ್ಟಡವನ್ನು ಸರಿಪಡಿಸುವಂತೆ ಕುಮಾರಸ್ವಾಮಿ ಎದುರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಮಕ್ಕಳೊಂದಿಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಿಸಿದ್ದ ಅವರು, ಕಾರು ಹತ್ತುವ ವೇಳೆ ಕೋಪದಿಂದ ರಮೇಶ್ ಕುಮಾರ್ ಅಷ್ಟುದ್ದ ಭಾಷಣ ಮಾಡ್ತಾನೆ ಸೂ… ಮಗ ಎಂದು ಬೈದಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News