HD Kumaraswamy JDS Prasident : ಕಳೆದ ವಿಧಾನಸಭೆ ಚುನಾವಣೆ ಮುಗಿದ ಮೇಲೆ ಸ್ಥಗಿತಗೊಂಡಿದ್ದ ಪಕ್ಷದ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರು ರಾಜ್ಯದ ಜೆಡಿಎಸ್ ಘಟಕದ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಅಲ್ಲದೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಜೆಡಿಎಸ್ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಈ ಎರಡೂ ಆದೇಶಗಳು ತಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದು ರಾಷ್ಟ್ರೀಯ ಅಧ್ಯಕ್ಷರು ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದರು. ಈ ಸಂದರ್ಭದಲ್ಲಿಯೇ ಎರಡು ಮಾಧ್ಯಮ ಹೇಳಿಕೆಗಳನ್ನು ಬಿಡುಗಡೆ ಮಾಡಿದರು ರಾಷ್ಟ್ರೀಯ ಅಧ್ಯಕ್ಷರು.


ಇದನ್ನೂ ಓದಿ: ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?! ಎಚ್ಡಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!


ರಾಜ್ಯ ಘಟಕ ವಿಸರ್ಜನೆ : ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ, ಅಂದರೆ; ಆರ್ಟಿಕಲ್ 10ರ ಪ್ರಕಾರ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ಆ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.


ಹಂಗಾಮಿ ಅಧ್ಯಕ್ಷರಾಗಿ ಕುಮಾರಸ್ವಾಮಿ : "ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಆ ಸಮಿತಿಯನ್ನು ಈಗಾಗಲೇ ವಿಸರ್ಜನೆ ಮಾಡಲಾಗಿದೆ. ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳನ್ನು ಸುಲಲಿತವಾಗಿ ಮುಂದುವರಿಸಿಕೊಂಡು ಹೋಗಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಡಾಕ್ ಅಧ್ಯಕ್ಷರನ್ನಾಗಿ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ" ಎಂದು ಮಾಜಿ ಪ್ರಧಾನಿಗಳು ಮತ್ತೊಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು


ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ, ಕಳೆದ ಕೆಲ ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳನ್ನು ಅವಲೋಕನ ಮಾಡಿದ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯು, ಈ ಮಹತ್ವದ ನಿರ್ಧಾರ ಕೈಗೊಳ್ಳಲು ರಾಷ್ಟ್ರೀಯ ಅಧ್ಯಕ್ಷರಿಗೆ ಸಂಪೂರ್ಣ, ಸರ್ವಸಮ್ಮತದ ಅಧಿಕಾರ ನೀಡಿತು.


ಅದಾದ ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಒಳಗೊಂಡಂತೆ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಪ್ರಧಾನಿಗಳು, ಸಮಿತಿ ಕೈಗೊಂಡ ಈ ಮಹತ್ವದ  ತೀರ್ಮಾನವನ್ನು ಪ್ರಕಟಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.