HD Kumaraswamy: ಕೊಳಕು ಮಂಡಲ @INCKarnataka ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ @hd_kumaraswamy ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಈಗ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. 


ಎಮ್ಮೆ ನಮ್ಮ ಹೆಮ್ಮೆ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೋಡ ಬನ್ನಿ ಎಮ್ಮೆ ಸೊಬಗು


ತಾವು (ಎಚ್‌ಡಿ‌ಕೆ) ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್‌ ವಿಕೃತಿ ಮಿತಿಮೀರಿದೆ. ಬೆಸ್ಕಾಂ ವಿದ್ಯುತ್‌ ವೇಗದಲ್ಲಿ ಎಫ್‌ ಐಆರ್‌ ದಾಖಲಿಸಿದೆ. ಕುಮಾರಸ್ವಾಮಿ ಅವರು ತಿಹಾರ್ ಜೈಲಿಗೆ ಹೋಗುವ ತಪ್ಪೇನೂ ಮಾಡಿಲ್ಲ. ಇಡಿ, ಸಿಬಿಐ, ಐಟಿ ಅವರ ಬೆನ್ನತ್ತಿಲ್ಲ. ಪುಡಿರೌಡಿ 'ಕಿಡಿಗೇಡಿಕುಮಾರ'ನ ಕೈಚಳಕಕ್ಕೆ ಹೆದರುವ ಪ್ರಶ್ನೆಯೂ ಇಲ್ಲ.


ರಾಜ್ಯವನ್ನೇ ಗುಡಿಸಿ ಗಂಡಾಂತರಿಸಿ ತಿಪ್ಪೆ ಸಾರಿಸಿದೆ ಲಜ್ಜೆಗೇಡಿ ಕಾಂಗ್ರೆಸ್. #YstTax,  #SstTax, ಕಾಸಿಗಾಗಿ ಪೋಸ್ಟಿಂಗ್, ಸಿಎಂ ಕಚೇರಿಲಿ ಸುಲಿಗೆ, ಗುತ್ತಿಗೆದಾರರಿಂದ ಪರ್ಸಂಟೇಜ್, ಸ್ಟಾನ್ಲಿ ಸೋಫಾ-ಮಂಚ, ಹ್ಯುಬ್ಲೆಟ್‌ ವಾಚು.. ಒಂದಾ ಎರಡಾ? ಐಷಾರಾಮಯ್ಯನ ಮುಖ ಉಳಿಸಲು ಕರೆಂಟ್‌ ವೈರ್‌ ಹಿಡಿದು ಕೆಟ್ಟಿದೆ ಗುಜರಿ ಶಾಪ್  ಕಾಂಗ್ರೆಸ್ ಎಂದು ಎಚ್‌ಡಿ‌ಕೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 


ಇನೊಬ್ಬರು ಹೇಳಿದ್ದನ್ನು ತಿರುಚಿ ವಕ್ರೀಕರಿಸುವ 'ವಿಕೃತಿ ವಿಕಾರಪೀಡಿತʼ ಕಾಂಗ್ರೆಸ್ಸಿಗೆ, ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಅದೇ ಅದರ ಧರ್ಮ. ಕಂಡ ಕಂಡವರ ಭೂಮಿಗೆ ಬೇಲಿ ಹಾಕುವ 'ಕಿಡಿಗೇಡಿಕುಮಾರ'ನ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ.


ಇದನ್ನೂ ಓದಿ- ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ : ಪ್ರಲ್ಹಾದ್‌ ಜೋಶಿ


ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್‌ ವೈರ್‌ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು 'ಶಕುನಿ ಯುದ್ಧ' ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ.


ಕಂಬದ ಕರೆಂಟಿನ ಬಗ್ಗೆ ಕಾಂಗ್ರೆಸ್ ಈ ಪರಿ  ಕೈಕೈ ಹಿಚುಕಿಕೊಳ್ಳುತ್ತಿರುವುದನ್ನು ನೋಡಿದರೆ ವೈರಿನಲ್ಲಿಯೂ ನರಿ ರಾಜಕೀಯ  ದಿಟವೆನಿಸುತ್ತದೆ. ಕುಮಾರಸ್ವಾಮಿ ಅವರ ಒಂದೇ ಒಂದು ಕ್ಷಿಪಣಿ ಸಾಕು, ಕಾಂಗ್ರೆಸ್ ‌'ರಕ್ಕಸ ರಿಪಬ್ಲಿಕ್' ಉಡೀಸ್ ಆಗಲಿಕ್ಕೆ. ಶಿಖಂಡಿ ಅಂತ್ಯಕಾಲ ಆರಂಭವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.