ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಬೆಂಗಳೂರು: ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಇವೆರಡೂ ವಿಷಯದಲ್ಲ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆ ರೀತಿಯ ನಿಲುವುಗಳಿವೆ ಹಾಗೂ ಅದರಲ್ಲಿ ಸ್ವಾರ್ಥ ರಾಜಕಾರಣ ಅಡಗಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ?
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ ಬಗ್ಗೆ ಪ್ರಹಾರ ನಡೆಸಿದಾರೆ.
ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಅದರ ಉದ್ದೇಶ ಲೋಕಸಭೆ ಚುನಾವಣೆ ಅಷ್ಟೇ ಎಂದಿರುವ ಅವರು, ʼರಾವಣ ತಲೆಗಳ ಕಾಂಗ್ರೆಸ್ ರಾಜಕಾರಣʼ ಎಂದು ಲೇವಡಿ ಮಾಡಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, "ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ" ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; "ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ" ಎಂದಿದ್ದಾರೆ!! ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!
ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ!! ಎಂದು ಕಾಂಗ್ರೆಸ್ ಬಣ್ಣವನ್ನು ಕುಮಾರಸ್ವಾಮಿ ಅವರು ಬಯಲು ಮಾಡಿದ್ದಾರೆ.
ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, "ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ.." ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಅವರು ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.
ಕೇರಳದ ಎಲ್ ಡಿಎಫ್ ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು?
ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.