HD Kumaraswamy: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಅವರ ಬಗ್ಗೆ ʼಕಾಂಗ್ರೆಸ್ʼ ಮೊಸಳೆ ಕಣ್ಣೀರು - ಹೆಚ್.ಡಿ ಕೆ

Opening Of Parliament House: ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

Written by - Zee Kannada News Desk | Last Updated : May 26, 2023, 02:58 PM IST
  • ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ನ್ನು ಟೀಕಿಸಿದ ಹೆಚ್.ಡಿ.ಕುಮಾರಸ್ವಾಮಿ
  • ಕಾಂಗ್ರೆಸ್ ಆಡಳಿತದ ವಿರುದ್ದ ವಾಗ್ದಾಳಿ ನಡೆಸಿದ ಹೆಚ್.ಡಿ ಕೆ
  • ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ
HD Kumaraswamy: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಅವರ ಬಗ್ಗೆ ʼಕಾಂಗ್ರೆಸ್ʼ ಮೊಸಳೆ ಕಣ್ಣೀರು - ಹೆಚ್.ಡಿ ಕೆ title=

ಬೆಂಗಳೂರು: ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಅಲ್ಲದೆ, ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದೇ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ

ಸಂಸತ್ ಭವನ ಉದ್ಘಾಟನೆಗೆ 21 ಪಕ್ಷಗಳು ಬಹಿಷ್ಕಾರ ಹಾಕಿವೆ. ಅದು ಆಯಾ ಪಕ್ಷದ ನಿಲವು. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು. ರಾಷ್ಟ್ರಪತಿ ಗಳಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲವೇ? ಎಂದು ಅವರು ಕೇಳಿದರು.

ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!

ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದಾರಾ ಕಾಂಗ್ರೆಸ್ ನಾಯಕರು? ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ? ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಅಂತಾ ನಾಟಕ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಿದ್ದಾರೆ. ಹಾಗಾಗಿ ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಇದರಿಂದ ಬಿಜೆಪಿ ಬಗ್ಗೆ ಜೆಡಿಎಸ್ ಮೃದುಧೋರಣೆ ಅಂತಾ ತಿಳಿಯುವ ಅಗತ್ಯ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News