ಮಂಡ್ಯ: ಗ್ಯಾರಂಟಿಗಳ ಮೂಲಕ ಜನರ ಕಣ್ಣಿಗೆ ಕಾಂಗ್ರೆಸ್ ಸರ್ಕಾರ ಮಂಕುಬೂದಿ ಎರಚುತ್ತಿದೆ. ಮಂಡ್ಯ ಜನರಿಗೆ ಕಾವೇರಿ ನೀರಿನ ಗ್ಯಾರಂಟಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಳವಳ್ಳಿ ತಾಲೂಕಿನ ಬೆಳಕವಾಡಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ. ಆದರೆ, ಮಂಡ್ಯ ಜಿಲ್ಲೆಯಲ್ಲಿ ಸರ್ಕಾರವೇ ಸೃಷ್ಟಿಸಿರುವ ಕೃತಕ ಬರಗಾಲದಿಂದ ಕಬ್ಬು, ಭತ್ತದ ಬೆಳೆ ಒಣಗಿ ಹೋಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಈ ಸರ್ಕಾರ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.


ಇದನ್ನೂ ಓದಿ: ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾದ ಟಾಪ್ 3 ಆಟಗಾರರನ್ನು ಆಯ್ಕೆ ಮಾಡಿದ ಇರ್ಫಾನ್ ಪಠಾಣ್


ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮಾಡಲು ಕರ್ನಾಟಕಕ್ಕೆ ಅವಕಾಶ ಕೊಡುವುದಿಲ್ಲ. ಕೇಂದ್ರ ಅನುಮತಿ ಕೊಡುವುದಕ್ಕೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಮಿತ್ರಪಕ್ಷ ತಮಿಳುನಾಡಿನ ಡಿಎಂಕೆ ಪಕ್ಷ ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬರೆದುಕೊಂಡಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾದ ಅನ್ಯ ರಾಜ್ಯದ ಪಕ್ಷದ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ನೇರ ಆರೋಪ ಮಾಡಿದರು.


ಕನ್ನಡಿಗರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಕಾಳಜಿ ಇದ್ದರೆ ತಮಿಳುನಾಡಿನವರು ಕೇಂದ್ರದಲ್ಲಿ ಹಾಕಿರುವ ತಕರಾರು ಅರ್ಜಿಗಳನ್ನು ಹಿಂಪಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಲಿ. ಅವರ ಮಿತ್ರಪಕ್ಷದ ಮನವೊಲಿಸಲಿ. ಡಿಎಂಕೆ ನಾಯಕ ಸ್ಟಾಲಿನ್ ಅವರ ಮನವೊಲಿಸಲಿ. ಕಾಂಗ್ರೆಸ್ ಆ ಕೆಲಸ ಮಾಡಿದರೆ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಅದಕ್ಕೆ ಹಣ ಬಿಡುಗಡೆ ಮಾಡಿಸುವುದು ನನ್ನ ಜವಾಬ್ದಾರಿ ಎಂದು ಹೇಳಿದರು.


ಇದನ್ನೂ ಓದಿ: 2 ಮಕ್ಕಳಿದ್ದರೂ ನಟಿ ಜೊತೆ ಅಫೇರ್! 2 ಮದುವೆಯಾದ್ರೂ ಸಿಗದ ನೆಮ್ಮದಿ! ಕಡೆಗೆ ಇಬ್ಬರಿಗೂ ಡಿವೋರ್ಸ್ ನೀಡಿ ಒಬ್ಬಂಟಿಯಾದ ಭಾರತದ ಸ್ಟಾರ್ ಕ್ರಿಕೆಟಿಗ!


ಕಾಂಗ್ರೆಸ್ ರಾಜ್ಯಕ್ಕೆ ಬೇಕಾದ ಶಾಶ್ವತ ಕೆಲಸಗಳನ್ನು ಮಾಡುವುದು ಬಿಟ್ಟು ಅಗ್ಗದ ಕಾರ್ಯಕ್ರಮಗಳಿಗೆ ಜೋತು ಬಿದ್ದು ಜನರನ್ನು ಯಮಾರಿಸುತ್ತಿದೆ. ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ. ಕಾವೇರಿ ನೀರಿನ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್, ಡಿಎಂಕೆ ಪ್ರಣಾಳಿಕೆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಮಯಕ್ಕೆ ತಕ್ಕ ರಾಜಕಾರಣ ಮಾಡಿಕೊಂಡು ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಅವರು ಕಿಡಿಕಾರಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.