ಶಂಕಿತ ಉಗ್ರರ ಬಂಧನ: ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಎಚ್.ಡಿ.ಕುಮಾರಸ್ವಾಮಿ ಆಗ್ರಹ
HD Kumaraswamy: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸರ್ಕಾರಕ್ಕೆ ಸಹಲೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆಗೆ ಬುಧವಾರ ಮಾತನಾಡಿರುವ ಅವರು, ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಾಜಿ ಪಿಎಂ ಎಚ್.ಡಿ. ದೇವೇಗೌಡರ ದೆಹಲಿ ಪ್ರವಾಸ ರದ್ದು
ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳಾಗ್ತಿವೆ. ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದರು.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸರ್ಕಾರಕ್ಕೆ ಸಹಲೆ ನೀಡಿದರು.
ಇದನ್ನೂ ಓದಿ: ಕಳ್ಳರ ಕರಾಮತ್ತು, 20 ಮೋಟಾರ್ಗಳ ವೈರ್, ಸ್ಟಾಟರ್ ಉಡೀಸ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.