ರಾಮನಗರ/ಬೆಂಗಳೂರು: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ. ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: Test Cricket: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗದ ಭಾರತೀಯ ಬ್ಯಾಟ್ಸ್’ಮನ್ ಯಾರು?
ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿ ಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.
ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿ.
ಡಿ.ಕೆ.ಸುರೇಶ್ ಅವರು ದೇಶ ವಿಭಜನೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಭುದ್ಧತೆಯ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಯಾತ್ರೆ ಮಾಡಿದರು. ಈಗ ವಿಭಜನೆಯ ಮಾತನ್ನು ಆಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ? ಇವರು ನ್ಯಾಯ ದೊರಕಿಸಿಕೊಡುತ್ತಾರೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ದೇಶದ ಮೊದಲನೇ ಬಜೆಟ್ ಗಾತ್ರ 174 ಕೋಟಿ ರೂಪಾಯಿ. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ಕಾಲಕ್ರಮೇಣ ನಾವು ಹಣಕಾಸು ಆಯೋಗಗಳನ್ನು ರಚನೆ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ.
ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂದು ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬ ಮಾನದಂಡದ ಅಡಿಯಲ್ಲಿ ಹಣ ಹಂಚಿಕೆ ಆಗುತ್ತದೆ. ಈ ಪದ್ಧತಿಯನ್ನು ಕಾಂಗ್ರೆಸ್ ಸರ್ಕಾರದ ಕಾಲದಲ್ಲಿಯೇ ಆರಂಭ ಮಾಡಲಾಯಿತು. ಮೋದಿ ಬಂದು ಪ್ರಾರಂಭ ಮಾಡಿದ್ದಲ್ಲ ಇದು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಶೋಷಿತರ ಹೆಸರಿನಲ್ಲಿ ಸಿಎಂ ಮಜಾ:
ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.
ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ. ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.
ಇದನ್ನೂ ಓದಿ: Rahu-Surya Yuti 2024: ಹದಿನೆಂಟು ವರ್ಷಗಳ ಬಳಿಕ ರಾಹುವಿನ ಹಿಡಿತಕ್ಕೆ ಸಿಕ್ಕ ಸೂರ್ಯ, ಈ ಜನರ ಮೇಲೆ ಅಪಾರ ಕನಕವೃಷ್ಟಿ!
ಕಮೀಷನ್ ದಂಧೆ ಅವ್ಯಾಹತ:
ಕಾಂಗ್ರೆಸ್ ಸರಕಾರದಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಕಾಂಗ್ರೆಸ್ ಮಾಜಿ ಸಚಿವ ಗಂಡಸಿ ಶಿವರಾಂ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಕಾಂಗ್ರೆಸ್ ನಲ್ಲಿ 50 ಪರ್ಸೆಂಟ್ ಇದೆ ಅಂತ ಅವರು ಹೇಳಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಮ್ಮ ಮಾರ್ಗದರ್ಶರು ಅಂತಿದ್ದರು. ಅವರೇ ಬಾಣಲಿಯಿಂದ ಬೆಂಕಿಗೆ ಬಿದ್ದ ಹಾಗಾಗಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಕುಮಾರಸ್ವಾಮಿ ಪ್ರಶ್ನೆ ಮಾಡಿದರೆ ಅವರಿಗೆ ಅಸಹನೆ, ಮೆಂಟಲ್ ಬ್ಯಾಲೆನ್ಸ್ ತಪ್ಪಿದೆ ಅಂತಾರೆ. ಪ್ರತಿನಿತ್ಯ ವರ್ಗಾವಣೆ ಮಾಡುವ ಕೆಲಸವೇ ಆಗಿದೆ. ಸಿದ್ದರಾಮಯ್ಯ ಮೋದಿ ಬಗ್ಗೆ ಕಮೆಂಟ್ ಮಾಡಿದ್ದಾರೆ. ಮೊದಲು ನಿಮ್ಮ ಸ್ಥಿತಿ ನೋಡಿಕೊಳ್ಳಿ ಎಂದು ಅವರು ಟೀಕಾಪ್ರಹಾರ ನಡೆಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.