`ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ`
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಅವರು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಅವರು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇದನ್ನೂ ಓದಿ: ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ
ಬಸವಣ್ಣನವರು ಸಮಾನತೆಯ ಕನಸು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಬಿಜೆಪಿ ಸರ್ಕಾರದ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95% ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ನಮ್ಮದು ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.
ರೂ. 1,20,000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52,009 ಕೋಟಿ ಬಡವರಿಗೆ ಖರ್ಚು ಮಾಡಿದ್ದೇವೆ, ಅದು ಕೂಡ ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಿಂದಿನ ಬಜೆಟ್‌ನಲ್ಲಿ ರೂ.77,750 ಕೋಟಿ ರೂ.ಗಳ ಸಾಲ, 23 ಸಾವಿರ ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳಾಗಿದೆ. ಕೇಂದ್ರ ಸರ್ಕಾರ 16.85 ಲಕ್ಷ ಕೋಟಿ ಈ ವರ್ಷಕ್ಕೆ ಸಾಲ ಮಾಡಿದೆ ಎಂದು ವಿವರಿಸಿದರು.
ಇದನ್ನೂ ಓದಿ: ದಕ್ಷಿಣ ಸಿನಿರಂಗಕ್ಕೆ ಎಂಟ್ರಿಕೊಟ್ಟ ಬಾಲಿವುಡ್ ಸ್ಟಾರ್: ಗೂಢಾಚಾರಿ-2 ತಂಡ ಸೇರಿದ ಇಮ್ರಾನ್ ಹಶ್ಮಿ
ರೂ. 3,71,383 ಕೋಟಿ ಗಾತ್ರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ (1%ಕ್ಕಿಂತ ಕಡಿಮೆ) ಕೊಡಲಾಗಿದೆ. ಎಸ್.ಸಿ.ಪಿ /ಟಿ.ಎಸ್.ಪಿ ಯಲ್ಲಿ 2017-18 ರಲ್ಲಿ 30 ಸಾವಿರ ಕೋಟಿ ನೀಡಲಾಗಿತ್ತು. ಕಳೆದ ಜುಲೈ ಬಜೆಟ್ ನಲ್ಲಿ ರೂ. 34 ಸಾವಿರ ಕೋಟಿ ಕೊಡಲಾಗಿತ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ರೂ.39 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ. ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುತ್ತಾರೆ. ಎಲ್ಲದರಲ್ಲೂ ಧಾರ್ಮಿಕ ದ್ವೇಷ ಹುಡುಕುವ ಬಿಜೆಪಿಗೆ ಕಾಮಾಲೆ ರೋಗ ಬಂದಿರಬಹುದು ಎಂದು ಟೀಕಿಸಿದರು.
ಬೆಂಗಳೂರಿಗೆ ಹೆಚ್ಚು ಕಾರ್ಯಕ್ರಮಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರ ಬೆಂಗಳೂರನ್ನು ನಿರ್ಲಕ್ಷ್ಯ ಮಾಡಿತ್ತು. ಈ ಬಾರಿ ಹೆಚ್ಚು ಯೋಜನೆ ಕೊಡಲಾಗಿದೆ. ಬ್ರ್ಯಾಂಡ್ ಬೆಂಗಳೂರು 1.50 ಕೋಟಿ ಜನರಿದ್ದು, ಅವರಿಗೆ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡಲಾಗಿದೆ. ಹೈದರಾಬಾದ್ ಕರ್ನಾಟಕ್ಕೆ 1,500 ಕೋಟಿ ರೂ.ಗಳು ಈವರೆಗ ವೆಚ್ಚವಾಗಿದ್ದು, ಈ ಬಾರಿ ಕ್ರಿಯಾ ಯೋಜನೆಯನ್ನು ಏಪ್ರಿಲ್ ನಲ್ಲಿಯೇ ತಯಾರಿಸಿ ಹೆಚ್ಚು ವೆಚ್ಚ ಮಾಡಲಾಗುವುದು ಎಂದು ಭರವಸೆ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್