`ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ`
G C Chandrashekar: ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.
ಬೆಂಗಳೂರು: ಪ್ರಜ್ವಲ್ ಪ್ರಕರಣವನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಎಸ್ ಐಟಿ ತನಿಖೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ.
ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ರಾಜೀವ್ ಗಾಂಧಿ ಅವರು ಪ್ರಧಾನಿ ಸ್ಥಾನಕ್ಕೆ ಮೆರುಗು ತಂದವರು. ನಾಯಕರು, ಪಕ್ಷದ ಕಾರ್ಯಕರ್ತರು, ವಿರೋಧ ಪಕ್ಷದ ನಾಯಕರ ಜೊತೆ ಹೇಗೆ ನಡೆದುಕೊಳ್ಳಬೇಕು ಎನ್ನುವ ಸಂಸ್ಕಾರವನ್ನು ಕುಟುಂಬದಿಂದಲೇ ಎರವಲು ಪಡೆವರು ರಾಜೀವ್ ಗಾಂಧಿ.ಪಕ್ಷದ ಶ್ರೀಲಂಕಾ ದೇಶದಲ್ಲಿ ಆಗುತ್ತಿದ್ದ ಅಂಶಾಂತಿಯನ್ನು ಮಟ್ಟ ಹಾಕಲು ಸೈನ್ಯ ಕಳುಹಿಸಿದ ಕಾರಣಕ್ಕೆ ತಮ್ಮ ಪ್ರಾಣವನ್ನೇ ದೇಶಕ್ಕೆ ಅರ್ಪಿಸಿದ ಜೀವ ರಾಜೀವ್ ಗಾಂಧಿ ಎಂದು ಅವರು ಸ್ಮರಿಸಿದರು.
ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ
ಅಶೋಕ್ ಅವರ ಮಾತುಗಳನ್ನು ಕೇಳುತ್ತಿದ್ದರೇ ಇವರಿಗಿಂತ ಸಿ.ಟಿ.ರವಿ ಅವರೇ ಪರವಾಗಿಲ್ಲ ಎಂದು ಎನಿಸುತ್ತಿದೆ. ಅಷ್ಟು ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ನೋವು ತಂದಿದೆ. ಅವರ ಕುಟುಂಬಕ್ಕೆ ನೋವಾಗಿದೆ.ಆದರೆ ತಪ್ಪನ್ನು ಸಮರ್ಥಿಸಿಕೊಳ್ಳುವುದು ಘೋರ ಅಪರಾಧ ಎಂದು ಅವರು ಟೀಕಿಸಿದರು.
ಇದನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಎಸ್ ಐಟಿ ತನಿಖೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇವರು ಕೇಳೀದಂತೆ ತನಿಖಾ ಅಧಿಕಾರಿಗಳು ಕೇಳಬೇಕು, ತನಿಖೆ ಇವರು ಹೇಳಿದಂತೆ ನಡೆಯಬೇಕು, ಕೇಸ್ ಮುಚ್ಚಿ ಹಾಕಬೇಕು, ಅವರಂತೆ ಎಲ್ಲಾ ನಡೆಯಬೇಕು, ಇವರು ಹೇಳಿದಂತೆ ಎಲ್ಲರೂ ಕೇಳಬೇಕು ಎನ್ನುವ ಕುಮಾರಸ್ವಾಮಿ ಅವರ ನಡೆ ಖಂಡನೀಯ ಎಂದು ಅವರು ಕಿಡಿ ಕಾರಿದರು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ
ನನ್ನ ಡಿ.ಕೆ.ಶಿವಕುಮಾರ್ ಕೆಣಕಿದ್ದಾರೆ ಅವರನ್ನು ಬಿಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರೇ ನಿಮ್ಮದು ಯಾವ ರೀತಿಯ ಮಾತಿನ ದಾಟಿ. ಇದು ಸರಿಯೇ? ಯಾವ ರೀತಿಯ ಭಾಷೆ ಉಪಯೋಗಿಸುತ್ತಿದ್ದೀರಿ ನೀವು. ದೇಶದಲ್ಲಿ ಸಂವಿಧಾನವಿದೆ. ಇದರ ಅರಿವು ಇಟ್ಟುಕೊಂಡು ಅವರು ಮಾತನಾಡಬೇಕು ಎಂದು ಅವರು ತಿಳಿಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.