"ಈ ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ"

ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.

Written by - Zee Kannada News Desk | Last Updated : Oct 30, 2022, 08:52 PM IST
  • ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದು ನೋಡಿ ನನಗೆ ಸಂತೋಷ ಆಗಿದೆ.
  • ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
  • ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು
"ಈ ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ" title=

ಬೆಂಗಳೂರು: ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಇದನ್ನೂ ಓದಿ: "ಸಿಎಂ ಬೊಮ್ಮಾಯಿ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು"-ಸಿದ್ದರಾಮಯ್ಯ

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು ಅವರು ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಮಾತು ಕೊಟ್ಟ ಹಾಗೆ ಎಲ್ಲ ಕೆಲಸಗಳನ್ನು ಮಾಡಿದರು ಸಾಲಮನ್ನಾ ಮಾಡಿ ಮಾತು ಉಳಿಸಿಕೊಂಡರು. ಹೀಗಾಗಿ ನನ್ನ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಮತ್ತೊಮ್ಮೆ ಈ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು. 

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪಕ್ಷ ಗೆಲ್ಲಲು ಸಾಧ್ಯವಾದ ಎಲ್ಲ ಕೆಲಸವನ್ನು ಮಾಡುತ್ತೇನೆ. ಮುಖಂಡರು, ಕಾರ್ಯಕರ್ತರು ಎಲ್ಲರೂ ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದ ಪಕ್ಷಕ್ಕೆ ದುಡಿಯಬೇಕು. ನಿಸ್ವಾರ್ಥವಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: Karnataka Rajyotsava Award: 67ನೇ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ, ಅವರು ಕನಸು ಕಾಣುತ್ತಿರುವ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೆ ತರುತ್ತಾರೆ. ಇಡಿ ರಾಜ್ಯದ ಅಭಿವೃದ್ಧಿಗೆ ಪಂಚರತ್ನ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಮಾಜಿ ಪ್ರಧಾನಮಂತ್ರಿಗಳು ನುಡಿದರು.ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು ಎಂದು ಮಾಜಿ ಪ್ರಧಾನಿಗಳು ಪುನರುಚ್ಚರಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದು ನೋಡಿ ನನಗೆ ಸಂತೋಷ ಆಗಿದೆ. ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News