ಬೆಂಗಳೂರು: ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ.ಕಾಕತಾಳೀಯ ಎಂಬಂತೆ ಇಂದು ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.


COMMERCIAL BREAK
SCROLL TO CONTINUE READING

ಮಕ್ಕಳ ಶಿಕ್ಷಣ ಬಹಳ ಮುಖ್ಯ ಎನ್ನುವುದರಲ್ಲಿ ಯಾವುದೇ ಅನುಮಾನವೇ ಇಲ್ಲ. ಆದರೆ, ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕಾದ್ದು ಎಲ್ಲರ ಕರ್ತವ್ಯ.ಈ ನಿಟ್ಟಿನಲ್ಲಿ ಸರಕಾರ ಮಕ್ಕಳ ಭವಿಷ್ಯದ ಬಗ್ಗೆ ನಿರ್ಲಕ್ಷ್ಯವಹಿಸದೆ ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಸರಿ ಮಾಡಿ ಮಕ್ಕಳ ಭವಿಷ್ಯಕ್ಕೆ ಒಳ್ಳೆಯದನ್ನು ಮಾಡಬೇಕು ಎಂದು ಅವರು ಒತ್ತಾಯಿಸಿದರು.


ಇದನ್ನೂ ಓದಿ : 'ದಿ ಕಾಶ್ಮೀರ್ ಫೈಲ್ಸ್' ತಯಾರಕರಿಗೆ J&K ಕೋರ್ಟ್ ಮಹತ್ವದ ಆದೇಶ.. ಆ ಒಂದು ದೃಶ್ಯ ತೋರಿಸದಿರಲು ಸೂಚನೆ


ವಿಧಾನ ಸೌಧದ ಬಳಿ ಮಾಧ್ಯಮಗಳಿಗೆ ಹಿಜಾಬ್ (Karnataka Hijab Controversy) ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು; ಶಾಲಾ ಕಾಲೇಜುಗಳಲ್ಲಿ ಅಹಿತಕರ ವಾತಾವರಣ ಇತ್ತು.ಸಮವಸ್ತ್ರದ ಕಾರಣಕ್ಕೆ ಸಮಾಜದಲ್ಲಿ ಅಶಾಂತಿ ಉಂಟಾಗಿತ್ತು.ಇದರಿಂದಾಗಿ ಶಿಕ್ಷಣ ವ್ಯವಸ್ಥೆ ಹಾಳಾಗಿತ್ತು.ಇದನ್ನು ಸರಿದಾರಿಗೆ ತರುವ ಉದ್ದೇಶದಿಂದ ನಿಲುವಳಿ ಮಂಡಿಸಿದ್ದೇನೆ.ಸದನದಲ್ಲಿ ಈ ಬಗ್ಗೆ ನಾಳೆ ಚರ್ಚೆ ಮಾಡುತ್ತೇನೆ.ಇದಕ್ಕೆ ಸಭಾಧ್ಯಕ್ಷರು ಅವಕಾಶ ನೀಡುತ್ತಾರೆಂದು ನಂಬಿದ್ದೇನೆ ಎಂದು ಹೇಳಿದರು.


ಹಿಂಸಾಚಾರ ಮತ್ತು ಗಲಾಟೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಿವೆ.ಆತಂಕದ ಪರಿಸ್ಥಿತಿ ಇದೆ.ಇದೆಲ್ಲವೂ ಸರಿ ಹೋಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಲ್ಲ, ಆದರೆ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತಾರೆ: ಕಪಿಲ್ ಸಿಬಲ್


'ಕಾಂಗ್ರೆಸ್ ನವರೂ ಕಾನೂನು ಹದಗೆಟ್ಟಿರುವ ಬಗ್ಗೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತಾರೆ ಎಂಬ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿದೆ.ಮಂಡಿಸಲಿ, ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿ.ನನ್ನದೇನೂ ತಕರಾರಿಲ್ಲ 'ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.