ಬೆಂಗಳೂರು: ರಾಷ್ಟ್ರೀಯ ಪಕ್ಷಗಳೆರಡೂ(National Parties) ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ‘ವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಹಿಂದುಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂದಂಭ ಎಚ್​ಡಿಕೆ ಸರಣಿ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ(Karnataka) ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ  ಪ್ರತಿಷ್ಠೆಗೆ ಕೊಳ್ಳಿ ಇಟ್ಟು ‘ವಿಕೃತ ಕೇಕೆʼ ಹಾಕುತ್ತಿವೆ’ ಅಂತಾ ಕಿಡಿಕಾರಿದ್ದಾರೆ.


ಸಮಾಜ ಘಾತುಕರನ್ನು ಬೆಳೆಸಿದ್ದು ಕಾಂಗ್ರೆಸ್, ಮತಾಂಧರನ್ನು ಪೋಷಿಸಿದ್ದು ಸಿದ್ದರಾಮಯ್ಯ: ಬಿಜೆಪಿ


‘ಎರಡೂ ರಾಷ್ಟ್ರೀಯ ಪಕ್ಷಗಳು(National Parties) ರಾಜ್ಯಾದ್ಯಂತ ‘ರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು. ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ‘ನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ‘ಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು’ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Shivamogga Youth Murder Case)... ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ‘ಟೂಲ್ʼಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು’ ಅಂತಾ ಎಚ್​ಡಿಕೆ ಹೇಳಿದ್ದಾರೆ.


ಇದನ್ನೂ ಓದಿ: ಸಿದ್ದರಾಮಯ್ಯ ಹೇಳುವುದೆಲ್ಲವೂ ಸುಳ್ಳು, ಸುಳ್ಳು, ಸುಳ್ಳು: ಬಿಜೆಪಿ ಟೀಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.