ಹಾಲಿನ ದರದ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ : ಹೆಚ್ಡಿಕೆ ಆಕ್ರೋಶ
ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಕಿಡಿಕಾರಿದರು.
ಬೆಂಗಳೂರು : ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಅಲ್ಲದೆ, ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ:ಹುಳು ಕಾಟಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೈರಾಣು
ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.