ಬೆಂಗಳೂರು: ರಾಮನವಮಿ ಶೋಭಾಯಾತ್ರೆ ಹೆಸರಿನಲ್ಲಿ ಬೇರೊಂದು ಸಮುದಾಯದ ಜನರ ಶಾಂತಿಗೆ ಭಂಗ ತರುವುದು ಬೇಡವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಶ್ರೀರಾಮನವಮಿ ಶೋಭಾಯಾತ್ರೆ ಬಗ್ಗೆ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದಾರೆ.  


COMMERCIAL BREAK
SCROLL TO CONTINUE READING

ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು’ ಎಂದು ಹೇಳಿದ್ದಾರೆ.


ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್


‘ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.


‘ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ’ವೆಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.


ಅತೀಹೆಚ್ಚು ಸುಳ್ಳು ಹೇಳಿದ ಬಿಜೆಪಿ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ: ಸಿದ್ದರಾಮಯ್ಯ


‘ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು’ ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಎಚ್‍ಡಿಕೆ ಮನವಿ ಮಾಡಿಕೊಂಡಿದ್ದಾರೆ.


ಕುಮಾರಸ್ವಾಮಿ ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.