ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ- ಎಚ್‍ಡಿಕೆ

Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Written by - Puttaraj K Alur | Last Updated : Dec 1, 2023, 01:29 PM IST
  • ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ
  • ಮಕ್ಕಳು & ಪೋಷಕರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಉದ್ದೇಶ
  • ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದ ಕುಮಾರಸ್ವಾಮಿ
ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ- ಎಚ್‍ಡಿಕೆ title=
ಶಾಲೆಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಕರಣವು ಭಾರೀ ಆತಂಕವನ್ನುಂಟು ಮಾಡಿದೆ. ಈಗಾಗಲೇ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಲಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ.

ಇನ್ನು ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ’ ಎಂದು ಹೇಳಿದ್ದಾರೆ. ‘ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: "ಎರಡು ದಿನಗಳಲ್ಲಿ ವರದಿ ತಗೊಂಡು ಕ್ರಮ ತೆಗೆದುಕೊಳ್ಳುತ್ತೇವೆ"

‘ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

‘ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸಬಾರದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: "ಪಂಚರಾಜ್ಯಗಳ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News