ಬೆಂಗಳೂರು: ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್‌ಡೌನ್‌ (Lockdown) ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್  ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ‌.


COMMERCIAL BREAK
SCROLL TO CONTINUE READING

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೊದಲ ಟ್ವೀಟ್ ನಲ್ಲಿ‌ 'ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್‌ಡೌನ್‌ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್  ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ' ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.



ಇನ್ನೊಂದು ಟ್ವೀಟ್ ನಲ್ಲಿ 'ರಾಜ್ಯ ಸರ್ಕಾರ MSME ಗಳಿಗೆ ಕೇಂದ್ರ ಸರ್ಕಾರದ  ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸುಮಾರು  6 ಲಕ್ಷಕ್ಕೂ  ಹೆಚ್ಚುಮಂದಿ MSME ಉದ್ದಿಮೆದಾರರು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು' ಎಂದು ಹೇಳಿದ್ದಾರೆ.



ಮತ್ತೊಂದು ಟ್ವೀಟ್ ನಲ್ಲಿ ‌'ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ  ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ' ಎಂದಿದ್ದಾರೆ.