Rajya Sabha Elections: ಬಿಜೆಪಿ ಸೋಲಿಸಲು JDSಗೆ ಕಾಂಗ್ರೆಸ್ ಬೆಂಬಲಿಸಬೇಕು- ಎಚ್‍ಡಿಕೆ
ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಡಿ.ಕುಪೇಂದ್ರ ರೆಡ್ಡಿ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕೆಂದು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಜೆಡಿಎಸ್ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬಳ್ಳಾರಿ ನಗರ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ
‘ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು’ ಎಂದು ಎಚ್‍ಡಿಕೆ ಒತ್ತಾಯಿಸಿದ್ದಾರೆ.
ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು. ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ & ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಪಾಲಿಕೆ ವ್ಯಾಪ್ತಿಯ ಶಾಲೆಗಳಲ್ಲಿ ಶಿಕ್ಷಕರ ಕೊರತೆ..! ಮಕ್ಕಳು ಬಂದರೂ ಟೀಚರ್ ಇಲ್ಲ ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.