ಸದನದಿಂದ ಶಾಸಕರ ಅಮಾನತು : ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್‌ಡಿಕೆ ಕಿಡಿ

ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

Written by - Prashobh Devanahalli | Edited by - Krishna N K | Last Updated : Jul 19, 2023, 08:00 PM IST
  • ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ.
  • ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
  • ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದ ಮಾಜಿ ಸಿಎಂ.
ಸದನದಿಂದ ಶಾಸಕರ ಅಮಾನತು : ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್‌ಡಿಕೆ ಕಿಡಿ title=

ಬೆಂಗಳೂರು : ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಬೃಹತ್ ಮಳೆ ನೀರುಗಾಲುವೆಗಳ ಒತ್ತುವರಿ ತೆರವಿಗೆ ಸೂಚನೆ..!

ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು: ಇದು ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಶಿಷ್ಟಾಚಾರ ಆಗ, ಈಗ, ಯಾವಾಗಲೂ ಒಂದೇ : ಪ್ರತಿಪಕ್ಷಗಳ ನಡೆಗೆ ಡಿಸಿಎಂ ಡಿಕೆಶಿ ಆಕ್ರೋಶ

ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು  ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ‌ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆಡಿಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ‌ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Viral Video: ಟೊಮೆಟೊದಲ್ಲಿ ಮಗಳ ತುಲಾಭಾರ ಮಾಡಿದ ತಂದೆ

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟ ಚಾರ ಉಲ್ಲಂಘನೆ ‌ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ‌ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ‌ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.

ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News