ಬೆಂಗಳೂರು: ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. #ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (SSC) ಹಿಂದಿ, ಇಂಗ್ಲಿಷ್‍ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ?’ ಅಂತಾ ಪ್ರಶ್ನಿಸಿದ್ದಾರೆ.


ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲಿಷ್‍ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ’ ಅಂತಾ ಎಚ್‍ಡಿಕೆ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದಲ್ಲಿ ಸ್ವತಂತ್ರವಾಗಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ -ಎಚ್ಡಿಕೆ


ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ- ಎಚ್.ಡಿ.ಕುಮಾರಸ್ವಾಮಿ ಆರೋಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ