ಬೆಂಗಳೂರು: ಬಿಜೆಪಿ ಸರ್ಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಗ್ಗಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಸಾವು ಪ್ರಕರಣ ಸಂಬಂಧ #CashForPosting ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿದ್ದಾರೆ.
‘ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ. ಈಗ ಸರ್ಕಾರ ಸತ್ಯ ಹೇಳಿದೆ! ಸದ್ಯ, ಸರ್ಕಾರವೂ ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಸಿಎಂ ಬಸವರಾಜ ಬೊಮ್ಮಾಯಿಯವರ ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ. ಅಲ್ಲಿಗೆ, ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರ್ಕಾರವೇ ಒಪ್ಪಿಕೊಂಡಂತೆ ಆಗಿದೆ’ ಎಂದು ಟೀಕಿಸಿದ್ದಾರೆ.
ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ.
ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ @BSBommai ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ.1/7#CashForPosting pic.twitter.com/mXqghB6cHz
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ..3/7#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
‘ಪೋಸ್ಟಿಂಗ್ ಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ. ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸಚಿವ ಎಂಟಿಬಿ ನಾಗರಾಜ್ ಅವರು ಹೇಳಿದ್ದು ಸತ್ಯವಾ ಅಥವಾ ಸುಳ್ಳಾ ಎನ್ನುವುದನ್ನು ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕು. ಸತ್ಯವೇ ಆಗಿದ್ದರೆ, ಇಡೀ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಲೇ ಬೇಕು. ಸುಳ್ಳು ಎನ್ನುವುದಾದರೆ ಹೇಳಿಕೆ ಕೊಟ್ಟ ಸಚಿವರ ಕಥೆ ಏನು? ದಯವಿಟ್ಟು ಮಾತನಾಡಿ ಮುಖ್ಯಮಂತ್ರಿಗಳೇ..5/7#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
‘ಎಂಟಿಬಿ ನಾಗರಾಜ್ ಹೇಳಿದ್ದು ನಿಜ ಎನ್ನುವುದಕ್ಕೆ ನಾನು ಟ್ಯಾಗ್ ಮಾಡಿರುವ ವಿಡಿಯೋ ತುಣುಕೇ ಸಾಕ್ಷಿ. ನನ್ನ ಪ್ರಶ್ನೆ ಇಷ್ಟೇ, ಈ ಬಗ್ಗೆ ಸಿಎಂ ಏನು ಹೇಳುತ್ತಾರೆ? ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು. ಎಂಟಿಬಿ ನಾಗರಾಜ್ ಹೇಳಿದ್ದು ಸತ್ಯವಾ ಅಥವಾ ಸುಳ್ಳಾ ಎನ್ನುವುದನ್ನು ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕು. ಸತ್ಯವೇ ಆಗಿದ್ದರೆ, ಇಡೀ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಲೇಬೇಕು. ಸುಳ್ಳು ಎನ್ನುವುದಾದರೆ ಹೇಳಿಕೆ ಕೊಟ್ಟ ಸಚಿವರ ಕಥೆ ಏನು? ದಯವಿಟ್ಟು ಮಾತನಾಡಿ ಮುಖ್ಯಮಂತ್ರಿಗಳೇ’ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ.7/7#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
ಇದನ್ನೂ ಓದಿ: ನಮ್ಮಲ್ಲಿ ಚರಿತ್ರೆ ಇದೆ, ಚಾರಿತ್ರ್ಯ ಬೇಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
‘ಬಿಜೆಪಿ ಸರ್ಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್‍ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ. ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರ್ಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ’ವೆಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ