ಬೆಂಗಳೂರು: ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ’ವೆಂದು ಎಚ್‍ಡಿಕೆ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

‘ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ‘ಹಿಂದುತ್ವ(Hindutva)ದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು- ಬಿ.ಕೆ.ಹರಿಪ್ರಸಾದ್


‘ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ(Halal Meat)ಇದೆ. ‘ಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ. ತಲೆತಲಾಂತರಗಳಿಂದ ಇಲ್ಲದ ‘ಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ‘ರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ‘ಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ’ ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರ(BJP Government)ದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ: ಪಕೀರನನ್ನು ಪ್ರಶ್ನೆ ಕೇಳಬೇಡಿ ಎಂದ ರಾಹುಲ್ ಗಾಂಧಿ


HD Kumaraswamy Tweet) ಕರೆ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.