ಬೆಂಗಳೂರು: ಕೇಂದ್ರ ಸರ್ಕಾರದಿಂದ ಕನ್ನಡಕ್ಕೆ ಸಿಕ್ಕ ಅನುದಾನವೆಷ್ಟು? ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ‘ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ’ ಎಂದು ಕಿಡಿಕಾರಿದ್ದಾರೆ. #ಕನ್ನಡ ಹ್ಯಾಶ್‍ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ.
ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? 1/5#ಕನ್ನಡ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
ಇದನ್ನೂ ಓದಿ: ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ: ಸಿಎಂ ಬೊಮ್ಮಾಯಿ
‘ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ’ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಶ್ರೀ @BSBommai ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ.3/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
‘ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಎದುರೇ ಬಿಜೆಪಿ ಸರ್ಕಾರ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ, ಕಾಂಗ್ರೆಸ್ ಪಕ್ಷಕ್ಕೂ ನಂಟಿದೆ: ಬಿಜೆಪಿ
ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ.5/5#ಕನ್ನಡ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
‘ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಕೇಂದ್ರ ಬಿಜೆಪಿ ಸರ್ಕಾರ, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ಕೇಂದ್ರ ಸರ್ಕಾರ ವರ್ತಿಸುತ್ತಿರುವ ರೀತಿ ಕಳವಳಕಾರಿ’ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
‘ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ’ವೆಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.