ಬೆಂಗಳೂರು: ಕೇಂದ್ರ ಸರ್ಕಾರದಿಂದ ಕನ್ನಡಕ್ಕೆ ಸಿಕ್ಕ ಅನುದಾನವೆಷ್ಟು? ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ‘ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ’ ಎಂದು ಕಿಡಿಕಾರಿದ್ದಾರೆ.  #ಕನ್ನಡ ಹ್ಯಾಶ್‍ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

‘ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!!  ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.


ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ: ಸಿಎಂ ಬೊಮ್ಮಾಯಿ


‘ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ’ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.


ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ, ಕಾಂಗ್ರೆಸ್ ಪಕ್ಷಕ್ಕೂ ನಂಟಿದೆ: ಬಿಜೆಪಿ 


ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ’ವೆಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.