ಬೆಂಗಳೂರು: ‘ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಬಿಜೆಪಿ ಸರ್ಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್ʼ ಆಡುತ್ತಿದೆ’ ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

 #ಅಸಹಾಯಕ_ಬಿಜೆಪಿ #ಅಸಮರ್ಥ_ಸರ್ಕಾರ ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂದು ಬೀಗುವ ಬಿಜೆಪಿ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ!!’ ಎಂದು ಕಿಡಿಕಾರಿದ್ದಾರೆ. ‘ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರ್ಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ?’ ಎಂದು ಪ್ರಶ್ನಿಸಿದ್ದಾರೆ..


ಒಟ್ಟು 61 ಯೋಜನೆಯ ₹3829 ಕೋಟಿ ಬಂಡವಾಳ ಹೂಡಿಕೆ ಅನುಮೋದನೆ- ಸಚಿವ ನಿರಾಣಿ


‘ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ "ಶಾಂತಿ ಕಾಪಾಡಿ" ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪ ಸುರಿದು ಬಂದರು. NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ!!’ವೆಂದು ಟೀಕಿಸಿದ್ದಾರೆ.


ಐಎಎಸ್ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್!


‘ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ 2 ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿಯವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ  ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ’ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.